ಬೆಳಗಾವಿ: ‘ರಾಜ್ಯದಲ್ಲಿ ನಡೆದಿರುವ ಮೂರು ಕ್ಷೇತ್ರಗಳ ಚುನಾವಣೆ ಫಲಿತಾಂಶವು ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕತ್ವಕ್ಕೆ ದೊಡ್ಡ ಪೆಟ್ಟು ಕೊಡಲಿದೆ. ಅವರಿಗೆ ಎಲ್ಲವೂ ಅರ್ಥವಾಗಲಿದೆ’ ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಬೆಂಗಳೂರಿಗೆ ವಾಪಸಾಗುವ ಮುನ್ನ ಇಲ್ಲಿ ಗುರುವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಇದನ್ನು ಹತ್ತು ಬಾರಿ ಯೋಚನೆ ಮಾಡಿ ಹೇಳುತ್ತಿದ್ದೇನೆ. ಸುಮ್ಮನೆ ಪ್ರಚಾರಕ್ಕೆ ಹೇಳುತ್ತಿಲ್ಲ’ ಎಂದರು.
‘ಉಪ ಚುನಾವಣೆ ಬಹಿರಂಗ ಪ್ರಚಾರ ಮುಗಿದಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಯಾವುದೇ ಚಟುವಟಿಕೆಗಳು ಕಂಡುಬರಲಿಲ್ಲ. ಜನರು ನಮಗೆ ಸ್ಪಂದಿಸಿದ ರೀತಿ ನೋಡಿದರೆ ನಾವು ಬಹಳ ದೊಡ್ಡ ಅಂತರದಲ್ಲಿ ಗೆಲ್ಲುತ್ತೇವೆ. ಇದರಲ್ಲಿ ಯಾವುದೇ ಅನುಮಾನ ಬೇಡ’ ಎಂದು ತಿಳಿಸಿದರು.
ಇದನ್ನೂ ಓದಿ... ಬೆಳಗಾವಿಯಲ್ಲಿ ಸಿಎಂ ಮತ ಬೇಟೆ: ಮಠಗಳಿಗೆ ಭೇಟಿ, ರೋಡ್ ಷೋ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.