ADVERTISEMENT

ಬೆಳಗಾವಿ ಲೋಕಸಭಾ ಉಪ ಚುನಾವಣೆ: ದಾಖಲೆ ಇಲ್ಲದ ₹42.71 ಲಕ್ಷ ವಶಕ್ಕೆ

​ಪ್ರಜಾವಾಣಿ ವಾರ್ತೆ
Published 31 ಮಾರ್ಚ್ 2021, 12:37 IST
Last Updated 31 ಮಾರ್ಚ್ 2021, 12:37 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

‌ಬೆಳಗಾವಿ: ಸಮರ್ಪಕ ದಾಖಲೆಗಳಿಲ್ಲದೆ ಕಾರಿನಲ್ಲಿ ಸಾಗಿಸುತ್ತಿದ್ದ ₹42.71 ಲಕ್ಷ ಹಣವನ್ನು ಘಟಪ್ರಭಾ ಬಳಿಯ ಚೆಕ್‌ಪೋಸ್ಟ್‌ನಲ್ಲಿ ಬುಧವಾರ ವಶಪಡಿಸಿಕೊಳ್ಳಲಾಗಿದೆ.

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಸ್ಥಾಪಿಸಿರುವ ಚೆಕ್‌ಪೋಸ್ಟ್‌ನಲ್ಲಿ ಚುನಾವಣಾ ಕಾರ್ಯನಿರತ ತಂಡವು ಮಹಾರಾಷ್ಟ್ರ ಮೂಲದ ಕಾರು ತಪಾಸಣೆ ನಡೆಸಿದಾಗ ನಗದು ಪತ್ತೆಯಾಗಿದೆ. ಚುನಾವಣಾ ಆಯೋಗದ ಮಾರ್ಗಸೂಚಿ ಪ್ರಕಾರ ಹಣವನ್ನು ಖಜಾನೆಗೆ ಒಪ್ಪಿಸಿ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ವರ್ಗಾಯಿಸಲಾಗಿದೆ. ಉಮೇಶ ಮನಗೂಳಿ‌ ನೇತೃತ್ವದ ಎಸ್.ಎಸ್.ಟಿ. ತಂಡವು ಕಾರ್ಯಾಚರಣೆ ನಡೆಸಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT