ADVERTISEMENT

ಬೆಳಗಾವಿ | ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಸಾವು: ಆರೋಪ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2025, 10:35 IST
Last Updated 30 ಆಗಸ್ಟ್ 2025, 10:35 IST
<div class="paragraphs"><p>ಆಸ್ಪತ್ರೆ ಮುಂದೆ&nbsp;ಪ್ರತಿಭಟನೆ (ಎಡ),&nbsp;ನಿಖಿತಾ ಮಾದರ (ಬಲ)</p></div>

ಆಸ್ಪತ್ರೆ ಮುಂದೆ ಪ್ರತಿಭಟನೆ (ಎಡ), ನಿಖಿತಾ ಮಾದರ (ಬಲ)

   

ಬೆಳಗಾವಿ: ‘ಇಲ್ಲಿನ ವಂಟಮುರಿ ಕಾಲೊನಿಯ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಬಾಣಂತಿ ನಿಖಿತಾ ಮಾದರ ಶುಕ್ರವಾರ ರಾತ್ರಿ ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯವೇ ಸಾವಿಗೆ ಕಾರಣ’ ಎಂದು ಆರೋಪಿಸಿ ಕುಟುಂಬದವರು ಆಸ್ಪತ್ರೆ ಮುಂದೆ ಶನಿವಾರ ಪ್ರತಿಭಟನೆ ನಡೆಸಿದರು.

‘ಶುಕ್ರವಾರ ಸಂಜೆ ಹೆರಿಗೆಗಾಗಿ ದಾಖಲಿಸಿದ್ದೆವು. ರಾತ್ರಿ ಸಿಸೇರಿಯನ್‌ ಮೂಲಕ ಹೆಣ್ಣು ಮಗುವಿಗೆ ಜನ್ಮಕೊಟ್ಟಿದ್ದಾರೆ. ನಂತರ ಆರೋಗ್ಯದಲ್ಲಿ ಏರುಪೇರಾದರೂ ವೈದ್ಯರು ಮಾಹಿತಿ ಕೊಟ್ಟಿಲ್ಲ. ಅವರ ನಿರ್ಲಕ್ಷ್ಯದಿಂದಲೇ ಬಾಣಂತಿ ಮೃತಪಟ್ಟಿದ್ದಾರೆ’ ಎಂದು ದೂರಿದರು.

ADVERTISEMENT

‘ನಿಖಿತಾ ಅವರಿಗೆ ಸಿಸೇರಿಯನ್‌ ಮೂಲಕ ಮೊದಲ ಹೆರಿಗೆಯಾಗಿತ್ತು. ಶನಿವಾರ ಬೆಳಿಗ್ಗೆ ಎರಡನೇ ಹೆರಿಗೆ ನಡೆಯಬೇಕಿತ್ತು. ಆದರೆ, ಆರೋಗ್ಯದಲ್ಲಿ ಸಮಸ್ಯೆ ಕಾಣಿಸಿಕೊಂಡ ಶುಕ್ರವಾರವೇ ವೈದ್ಯರು ಸಿಸೇರಿಯನ್‌ ಮೂಲಕ ಹೆರಿಗೆ ಮಾಡಿದ್ದಾರೆ. ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಐ.ಪಿ.ಗಡಾದ ‘ಪ್ರಜಾವಾಣಿ’ಗೆ ತಿಳಿಸಿದರು.

‘ಬಾಣಂತಿ ಕುಟುಂಬದವರ ದೂರು ಆಧರಿಸಿ, ಪ್ರಕರಣದ ತನಿಖೆಗಾಗಿ ತಂಡ ರಚಿಸುತ್ತೇವೆ. ತಪ್ಪೆಸಗಿರುವುದು ಕಂಡುಬಂದರೆ ಸಿಬ್ಬಂದಿ ವಿರುದ್ಧ ಕ್ರಮ ಜರುಗಿಸುತ್ತೇವೆ’ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಮೇಶ ದಂಡಗಿ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.