ADVERTISEMENT

ಬೆಳಗಾವಿ: ಹಾಸ್ಟೆಲ್‌ನಲ್ಲಿ ವೈದ್ಯ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 19 ಆಗಸ್ಟ್ 2025, 9:12 IST
Last Updated 19 ಆಗಸ್ಟ್ 2025, 9:12 IST
<div class="paragraphs"><p>ಸಾವು</p></div>

ಸಾವು

   

ಪ್ರಾತಿನಿಧಿಕ ಚಿತ್ರ

ಬೆಳಗಾವಿ: ಇಲ್ಲಿನ ಬಿಮ್ಸ್ ಆವರಣದಲ್ಲಿರುವ ಹಾಸ್ಟೆಲ್‌ನಲ್ಲಿ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬರು ಸೋಮವಾರ ರಾತ್ರಿ ಔಷಧಗಳನ್ನು ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ADVERTISEMENT

ಮಂಗಳೂರು ಮೂಲದ ಡಾ.ಪ್ರಿಯಾ (27) ಆತ್ಮಹತ್ಯೆಗೆ ಶರಣಾದವರು. ವಿವಿಧ ಬಗೆಯ ಔಷಧಗಳನ್ನು ಸೇವಿಸಿ ಸಾವು ಸಂಭವಿಸಿದ ಸಂದೇಹವಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಬಳಕ ನಿಖರ ಕಾರಣ ಗೊತ್ತಾಗಲಿದೆ ಎಂದು ಬಿಮ್ಸ್ ನಿರ್ದೇಶಕ ಡಾ.ಅಶೋಕ ಶೆಟ್ಟಿ ತಿಳಿಸಿದ್ದಾರೆ.

ಖಿನ್ನತೆಗೆ ಒಳಗಾಗಿದ್ದ ವಿದ್ಯಾರ್ಥಿನಿ ಕೆಲವು ದಿನಗಳ ಹಿಂದೆ ಕೂಡ ಆತ್ಮಹತ್ಯೆಗೆ ಯತ್ನಿಸಿ ಪ್ರಾಣಾಪಾಯದಿಂದ ಪಾರಾಗಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.