ಬೆಳಗಾವಿ: ಭಾಷಾ ಸಾಮರಸ್ಯ ಕದಡುವ ಹೇಳಿಕೆ ನೀಡಿದ ಮತ್ತು ಕನ್ನಡ ವಿರೋಧಿಗಳನ್ನು ಸನ್ಮಾನಿಸಿದ ಆರೋಪದ ಮೇಲೆ ಎಂಇಎಸ್ ಮುಖಂಡ ಶುಭಂ ಶೆಳಕೆ ಅವರನ್ನು ಪೊಲೀಸರು ಸೋಮವಾರ ಬಂಧಿಸಿದರು.
‘ಈಚೆಗೆ ಬೆಳಗಾವಿ ಬಳಿ ಬಸ್ ನಿರ್ವಾಹಕನ ಮೇಲೆ ನಡೆದ ಹಲ್ಲೆಯ ಘಟನೆಯನ್ನು ಶುಭಂ ತಮ್ಮ ಫೇಸ್‌ಬುಕ್ ಖಾತೆಯಲ್ಲಿ ಸಮರ್ಥಿಸಿಕೊಂಡದ್ದರು. ಕರ್ನಾಟಕದಲ್ಲಿನ ಕನ್ನಡ ಸಂಘಟನೆಗಳ ಬಗ್ಗೆ ಅವಹೇಳನೆ ಮಾಡಿದ್ದರು. ಕನ್ನಡಿಗರು ಮತ್ತು ಮರಾಠಿಗರ ನಡುವಿನ ಸೌಹಾರ್ದತೆ ಕದಡಲು ಯತ್ನಿಸಿದ್ದರು’ ಎಂಬ ಆರೋಪದಡಿ ಮಾಳಮಾರುತಿ ಠಾಣೆಯಲ್ಲಿ ಸ್ವಯಂಪ್ರೇರಿತ ದೂರು ದಾಖಲಿಸಿಕೊಳ್ಳಲಾಗಿತ್ತು. ಮರಾಠಿ ಭಾಷೆಯಲ್ಲೇ ಮಾತನಾಡುವಂತೆ ಕಿಣಿಯೆ ಗ್ರಾಮದ ಪಿಡಿಒಗೆ ಬೆದರಿಕೆ ಹಾಕಿದ ತಿಪ್ಪಣ್ಣ ಡೋಕ್ರೆ ಎಂಬಾತನನ್ನು ಸನ್ಮಾನಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.