ADVERTISEMENT

ಬೆಳಗಾವಿ: ಮಕ್ಕಳ ಆರೋಗ್ಯ ವಿಚಾರಿಸಿದ ಸಚಿವ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2025, 10:40 IST
Last Updated 16 ಸೆಪ್ಟೆಂಬರ್ 2025, 10:40 IST
   

ಬೆಳಗಾವಿ: ಇಲ್ಲಿನ ಜಿಲ್ಲಾಸ್ಪತ್ರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮಂಗಳವಾರ ಭೇಟಿ ನೀಡಿ, ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಉಪಾಹಾರ ಸೇವಿಸಿ ಅಸ್ವಸ್ಥರಾಗಿರುವ 16 ಮಕ್ಕಳ ಆರೋಗ್ಯ ವಿಚಾರಿಸಿದರು.

ಮಕ್ಕಳ ಆರೋಗ್ಯ ಸ್ಥಿತಿ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದ ಸಚಿವರು, ‘ಮಕ್ಕಳು ಸಂಪೂರ್ಣ ಗುಣಮುಖರಾಗುವವರೆಗೆ ಉತ್ತಮ ಚಿಕಿತ್ಸೆ ನೀಡಬೇಕು. ಅದಕ್ಕೆ ಸ್ಪಂದಿಸಿ ಮಕ್ಕಳು ಬೇಗ ಗುಣಮುಖರಾಗಬೇಕು. ಮಕ್ಕಳ ಚಿಕಿತ್ಸೆ ವಿಷಯದಲ್ಲಿ ನಿರ್ಲಕ್ಷ್ಯ ವಹಿಸಿದರೆ, ಸಂಬಂಧಿತರ ಮೇಲೆ ಕ್ರಮ ಕೈಗೊಳ್ಳಲಾಗುವುದು’ ಎಂದು ಎಚ್ಚರಿಕೆ ಕೊಟ್ಟರು.

ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ ಇತರರಿದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.