ADVERTISEMENT

ಬೆಳಗಾವಿ| ಬಾಲಕಿ ಅಪಹರಿಸಿ ಅತ್ಯಾಚಾರ: ನಾಲ್ವರಿಗೆ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2026, 2:56 IST
Last Updated 25 ಜನವರಿ 2026, 2:56 IST
<div class="paragraphs"><p>ಅತ್ಯಾಚಾರ</p></div>

ಅತ್ಯಾಚಾರ

   

ಸಾಂದರ್ಭಿಕ ಚಿತ್ರ

ಬೆಳಗಾವಿ: ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ಎಸಗಿ, ಚಿನ್ನದ ಸರ ಕಳ್ಳತನ ಮಾಡಿದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಹಾಗೂ ಇನ್ನಿಬ್ಬರಿಗೆ 20 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ, ಇಲ್ಲಿನ ಜಿಲ್ಲಾ ವಿಶೇಷ ಶೀಘ್ರಗತಿ ಪೋಕ್ಸೊ ನ್ಯಾಯಾಲಯವು ಶನಿವಾರ ತೀರ್ಪು ನೀಡಿದೆ.

ADVERTISEMENT

ಗಾಂಧಿ ನಗರದ ಸಾಕೀಬ್‌ಬೇಗ್‌ ಫಯಾಜ್‌ ನಿಜಾಮಿ (22), ರಾಜಾರಾಮ ನಗರದ ರವಿ ಸಿದ್ದಪ್ಪ ನಾಯ್ಕೋಡಿ (34) ಅವರಿಗೆ ಜೀವಾಧಿಗೆ ಶಿಕ್ಷೆ ಜೊತೆಗೆ ತಲಾ ₹8.76 ಲಕ್ಷ ದಂಡ ವಿಧಿಸಿದೆ. ಕೃತ್ಯಕ್ಕೆ ಸಹಕರಿಸಿದ್ದ ಸಾವಗಾಂವ ನಿವಾಸಿಗಳಾದ ರೋಹನ್ ರಾಜೇಶಕುಮಾರ ಪಾಟೀಲ (23) ಹಾಗೂ ಅಶುತೋಷ್ ಮಾರುತಿ ಪಾಟೀಲ (23) ಅವರಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ತಲಾ ₹6 ಲಕ್ಷ ದಂಡ ವಿಧಿಸಲಾಗಿದೆ. ಶಿಕ್ಷೆಗೆ ಗುರಿಯಾದವರಲ್ಲಿ ಒಬ್ಬ ಪೊಲೀಸ್‌ ಅಧಿಕಾರಿಯ ಪುತ್ರ ಕೂಡ ಇದ್ದಾನೆ.

2025ರ ಮೇ 10ರಂದು ಅಪ್ರಾಪ್ತೆಯನ್ನು ಅಪಹರಿಸಿ, ಫಾರ್ಮ್‌ಹೌಸ್‌ನಲ್ಲಿ ಬಲವಂತವಾಗಿ ಮದ್ಯಪಾನ ಮಾಡಿಸಿದ್ದರು. ಬಳಿಕ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಫಾರ್ಮ್‌ಹೌಸ್‌ ಬಾಡಿಗೆ ನೀಡಿದ ಮಾಲೀಕ ಸೇರಿದಂತೆ ಒಟ್ಟು 6 ಜನರ ವಿರುದ್ಧ ಟಿಳಕವಾಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಮಾರ್ಕೆಟ್ ಪೊಲೀಸ್ ಠಾಣೆಗೆ ವರ್ಗಾವಣೆಯಾಗಿತ್ತು. ಇನ್ನಿಬ್ಬರ ವಿಚಾರಣೆ ನಡೆಯಬೇಕಿದೆ.

ತನಿಖಾಧಿಕಾರಿಗಳಾದ ಪರಶುರಾಮ ಪೂಜೇರಿ ಹಾಗೂ ಮಹಾಂತೇಶ ಧಾಮಣ್ಣವರ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಪ್ರಕರಣಕ್ಕೆ ಸಂಬಂಧಿಸಿದಂತೆ 17 ಸಾಕ್ಷಿಗಳು, 124 ದಾಖಲೆಗಳು ಹಾಗೂ 5 ಮುದ್ದೆಮಾಲುಗಳನ್ನು ಪರಿಶೀಲಿಸಿದ ನ್ಯಾಯಾಧೀಶರಾದ ಎಂ.ಪುಷ್ಪಲತಾ ಅವರು, ನಾಲ್ವರಿಗೆ ಶಿಕ್ಷೆ ವಿಧಿಸಿದ್ದಾರೆ. ಸಂತ್ರಸ್ತ ಬಾಲಕಿಗೆ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ₹10 ಲಕ್ಷ ಪರಿಹಾರ ನೀಡುವಂತೆ ಆದೇಶಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ ಮಂಡಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.