ಪೊಲೀಸ್
(ಸಾಂದರ್ಭಿಕ ಚಿತ್ರ)
ಬೆಳಗಾವಿ: ಇಲ್ಲಿನ ಕಸಾಯಿ ಗಲ್ಲಿ ಬಳಿ ಶುಕ್ರವಾರ ಮಧ್ಯರಾತ್ರಿ ನಡೆದ ‘ಛೋಟಾ ಮೊಹರಂ’ ಮೆರವಣಿಗೆ ವೇಳೆ ಹರಿತವಾದ ಆಯುಧಗಳಿಂದ ಬಾಲಕನ ಮೇಲೆ ಹಲ್ಲೆ ಮಾಡಿದ ಆರೋಪದಡಿ ಮೂವರು ಬಾಲಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲೆಗೊಳಗಾದ ಬಾಲಕನ ತಲೆ ಮತ್ತು ಭುಜಕ್ಕೆ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.
‘ಮೆರವಣಿಗೆ ವೇಳೆ ಕುಣಿಯುವಾಗ ತಳ್ಳಾಟವಾಗಿ, ಎರಡು ಗುಂಪಿನವರ ಮಧ್ಯೆ ಗಲಾಟೆಯಾಗಿದೆ. ನಂತರ ಒಂದು ಗುಂಪಿನವರು ಬಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ’ ಎಂದು ನಗರ ಪೊಲೀಸ್ ಕಮಿಷನರ್ ಭೂಷಣ ಬೊರಸೆ ಸುದ್ದಿಗಾರರಿಗೆ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.