ಬೆಳಗಾವಿ: ‘ಸರ್ಕಾರಿ ನೌಕರರ ಮಾದರಿಯಲ್ಲೇ ಮಹಾನಗರ ಪಾಲಿಕೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಏಳನೇ ವೇತನ ಆಯೋಗದ ಸೌಲಭ್ಯ ನೀಡಲು ಆರ್ಥಿಕ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿ, ಇಲ್ಲಿನ ಮಹಾನಗರ ಪಾಲಿಕೆ ಆವರಣದಲ್ಲಿ ನೌಕರರು ನಡೆಸುತ್ತಿರುವ ಪ್ರತಿಭಟನೆ ಎರಡನೇ ದಿನವಾದ ಬುಧವಾರವೂ ಮುಂದುವರಿಯಿತು.
‘ನಮ್ಮ ಬೇಡಿಕೆಗಳನ್ನು ಪ್ರತಿಭಟನೆ ನಡೆಸುತ್ತಿದ್ದೇವೆ. ನ್ಯಾಯ ಸಿಗುವವರೆಗೂ ಹೋರಾಟದಿಂದ ಹಿಂದೆ ಸರಿಯಲ್ಲ’ ಎಂದು ನೌಕರರು ಹೇಳಿದರು.
ನೌಕರರ ಪ್ರತಿಭಟನೆ ಹಿನ್ನೆಲೆಯಲ್ಲಿ ಇಡೀ ಕಚೇರಿ ಸ್ತಬ್ಧವಾಗಿತ್ತು. ವಿವಿಧ ಕೆಲಸಕ್ಕಾಗಿ ಕಚೇರಿಗೆ ಬಂದಿದ್ದ ಸಾರ್ವಜನಿಕರು ಮತ್ತೆ ಪರದಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.