ADVERTISEMENT

ಬೆಳಗಾವಿ: ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಕೊಲೆ

​ಪ್ರಜಾವಾಣಿ ವಾರ್ತೆ
Published 26 ಅಕ್ಟೋಬರ್ 2020, 4:32 IST
Last Updated 26 ಅಕ್ಟೋಬರ್ 2020, 4:32 IST
ಸಾಂಕೇತಿಕ ಚಿತ್ರ
ಸಾಂಕೇತಿಕ ಚಿತ್ರ   

ಬೆಳಗಾವಿ: ಗುಂಪೊಂದು ಯುವಕನ ಮೇಲೆ ದಾಳಿ ನಡೆಸಿ ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ಇಲ್ಲಿನ ಗ್ಯಾಂಗ್ ವಾಡಿ ರಸ್ತೆಯಲ್ಲಿ ಭಾನುವಾರ ತಡರಾತ್ರಿ ನಡೆದಿದೆ.

ಮೃತರನ್ನು ಅಜಂ ನಗರದ ನಿವಾಸಿ ಶಹಬಾಜ್ (24) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರ ಕಾರಣ ಗೊತ್ತಾಗಿಲ್ಲ. ಮೃತ ವ್ಯಕ್ತಿ ರೌಡಿಶೀಟರ್ ಎಂದು ಗೊತ್ತಾಗಿದೆ.

ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.