ADVERTISEMENT

ನಾಮಪತ್ರಗಳ ಪರಿಶೀಲನೆ ಮೇ 27ರಂದು

ಕೊನೆಯ ದಿನ ನಾಮಪತ್ರ ಸಲ್ಲಿಕೆ ಭರಾಟೆ

​ಪ್ರಜಾವಾಣಿ ವಾರ್ತೆ
Published 26 ಮೇ 2022, 15:49 IST
Last Updated 26 ಮೇ 2022, 15:49 IST
ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ನಾಯಕರು ವಿಜಯದ ಸಂಕೇತ ತೋರಿಸಿದರು
ಬೆಳಗಾವಿಯಲ್ಲಿ ನಾಮಪತ್ರ ಸಲ್ಲಿಕೆಗೂ ಮುನ್ನ ಬಿಜೆಪಿ ನಾಯಕರು ವಿಜಯದ ಸಂಕೇತ ತೋರಿಸಿದರು   

ಬೆಳಗಾವಿ: ಬೆಳಗಾವಿ, ಬಾಗಲಕೋಟೆ ಹಾಗೂ ವಿಜಯಪುರ ಜಿಲ್ಲೆಗಳ ವ್ಯಾಪ್ತಿ ಹೊಂದಿರುವ ವಾಯವ್ಯ ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳಿಂದ ವಿಧಾನಪರಿಷತ್‌ಗೆ ಜೂನ್‌ 13ರಂದು ನಡೆಯಲಿರುವ ಚುನಾವಣೆಗೆ ನಾಮಪತ್ರಗಳ ಸಲ್ಲಿಕೆ ಭರಾಟೆ ಗುರುವಾರ ಕಂಡುಬಂತು.

ನಾಮಪತ್ರ ಸಲ್ಲಿಕೆಗೆ ಕೊನೆ ದಿನವಾದ್ದರಿಂದ ಹಲವರು ನಾಮಪತ್ರ ಸಲ್ಲಿಸಿದರು. ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಚುನಾವಣಾಧಿಕಾರಿ ಆಮ್ಲನ್‌ ಆದಿತ್ಯ ಬಿಸ್ವಾಸ್‌ ಮತ್ತು ಸಹಾಯಕ ಚುನಾವಣಾಧಿಕಾರಿ ನಿತೇಶ್‌ ಪಾಟೀಲ ಸ್ವೀಕರಿಸಿದರು.

ವಾಯವ್ಯ ಶಿಕ್ಷಕರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅರುಣ ಶಹಾಪುರ, ಪಕ್ಷೇತರ ಅಭ್ಯರ್ಥಿಗಳಾಗಿ ಸಂಗಮೇಶ ಚಿಕ್ಕನರಗುಂದ, ಕಾಂಗ್ರೆಸ್‌ನ ಸುನೀಲ ಸಂಕ, ಪದವೀಧರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಹಣಮಂತ ನಿರಾಣಿ, ಪಕ್ಷೇತರ ಅಭ್ಯರ್ಥಿಗಳಾಗಿ ಸಾಗರ ಅಕ್ಕತಂಗೇರಹಾಳ, ಭಾರತಿ ಚಿಕ್ಕನರಗುಂದ ಉಮೇದುವಾರಿಕೆ ಸಲ್ಲಿಸಿದರು.

ADVERTISEMENT

ಜೆಡಿಎಸ್‌ನ ಚಂದ್ರಶೇಖರ ಲೋಣಿ ಶಿಕ್ಷಕರ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿದರು. ಹಣಮಂತ, ಅರುಣ ಹಾಗೂ ಸುನೀಲ 2ನೇ ಬಾರಿಗೆ ಸಲ್ಲಿಸಿದರು.

ಬಿಜೆಪಿ ಅಭ್ಯರ್ಥಿಗಳಿಗೆ ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ, ಸಚಿವರಾದ ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಸಂಸದರಾದ ರಮೇಶ ಜಿಗಜಿಣಗಿ, ಮಂಗಲಾ ಅಂಗಡಿ, ಅಣ್ಣಾಸಾಹೇಬ ಜೊಲ್ಲೆ, ಪಿ.ಸಿ. ಗದ್ದಿಗೌಡರ, ಈರಣ್ಣ ಕಡಾಡಿ, ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಶಾಸಕರಾದ ರಮೇಶ ಜಾರಕಿಹೊಳಿ, ಅಭಯ ಪಾಟೀಲ, ಪಿ. ರಾಜೀವ, ಮಹೇಶ ಕುಮಠಳ್ಳಿ, ಮಹಾದೇವಪ್ಪ ಯಾದವಾಡ, ಎನ್. ಮಹೇಶ್, ದುರ್ಯೋಧನ ಐಹೊಳೆ, ಮಹಾಂತೇಶ ದೊಡ್ಡಗೌಡರ, ಅನಿಲ ಬೆನಕೆ, ಸಿದ್ದು ಸವದಿ, ‘ಕಾಡಾ’ ಅಧ್ಯಕ್ಷ ಡಾ.ವಿಶ್ವನಾಥ ಪಾಟೀಲ ಸಾಥ್‌ ನೀಡಿದರು. ಇದಕ್ಕೂ ಮುನ್ನ ನಾಯಕರು, ಗಣೇಶ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.