ADVERTISEMENT

ಮದುವೆ ಆಗುವುದಾಗಿ ನಂಬಿಸಿ ಬಾಲಕಿ ಮೇಲೆ ಅತ್ಯಾಚಾರ: ಅಪರಾಧಿಗೆ 30 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 15:28 IST
Last Updated 5 ಫೆಬ್ರುವರಿ 2026, 15:28 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಬೆಳಗಾವಿ: ಮದುವೆ ಆಗುವುದಾಗಿ ನಂಬಿಸಿ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ ಇಲ್ಲಿನ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯವು 30 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ ಹಾಗೂ ₹1.50 ಲಕ್ಷ ದಂಡ ವಿಧಿಸಿ ಗುರುವಾರ ತೀರ್ಪು ನೀಡಿದೆ.

ಹುಕ್ಕೇರಿ ತಾಲ್ಲೂಕಿನ ಮಾಸ್ತಿಹೊಳಿಯ ಮಂಜುನಾಥ ಶಂಕರ ಮೊಕಾಶಿ (24) ಶಿಕ್ಷೆಗೆ ಒಳಗಾದವ. ಅಂಕಲಗಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ 2025ರ ಜೂನ್‌ 23ರಂದು ಬಾಲಕಿಯನ್ನು ಬೈಕ್‌ ಮೇಲೆ ಕರೆದುಕೊಂಡು ಹೋಗಿದ್ದ. ಬಾಡಿಗೆ ಮನೆಯಲ್ಲಿ ಇಟ್ಟು ಆಕೆಯ ಮೇಲೆ ನಿರಂತರ ಅತ್ಯಾಚಾರ ಎಸಗಿದ್ದ. ವಿಷಯವನ್ನು ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಹೆದರಿಸಿದ್ದ ಎಂದು ಬಾಲಕಿ ದೂರಿನಲ್ಲಿ ತಿಳಿಸಿದ್ದಾರೆ.

ADVERTISEMENT

ಬಾಲಕಿ ನಾಪತ್ತೆಯಾದ ಬಗ್ಗೆ ಪೋಷಕರು ದೂರು ನೀಡಿದ್ದರು. ತನಿಖಾಧಿಕಾರಿಯಾಗಿದ್ದ ಪಿಎಸ್‌ಐ ಯಮನಪ್ಪ ಮಾಂಗ ಹಾಗೂ ಸಿಪಿಐ ಸುರೇಶ ಬಾಬು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ನ್ಯಾಯಾಧೀಶರಾದ ಸಿ.ಎಂ. ಪುಷ್ಪಲತಾ ಅವರು ಒಟ್ಟು 8 ಸಾಕ್ಷಿಗಳ ವಿಚಾರಣೆ, 70 ದಾಖಲೆಗಳು, 10 ಮುದ್ದೆ ಮಾಲುಗಳ ಆಧಾರದ ಮೇಲೆ ತೀರ್ಪು ಪ್ರಕಟಿಸಿದ್ದಾರೆ.

ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ₹4 ಲಕ್ಷ ಪರಿಹಾರ ಕೂಡ ಘೋಷಿಸಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಎಲ್.ವಿ. ಪಾಟೀಲ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.