ADVERTISEMENT

ಬೆಳಗಾವಿ ಜಿಲ್ಲೆಯಲ್ಲಿ ಮುಂದುವರಿದ ಮಳೆ

​ಪ್ರಜಾವಾಣಿ ವಾರ್ತೆ
Published 23 ಅಕ್ಟೋಬರ್ 2019, 7:11 IST
Last Updated 23 ಅಕ್ಟೋಬರ್ 2019, 7:11 IST
ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತ
ಬೆಳಗಾವಿ ಜಿಲ್ಲೆ ಸವದತ್ತಿಯಲ್ಲಿ ಧುಮ್ಮಿಕ್ಕುತ್ತಿರುವ ಜಲಪಾತ   

ಬೆಳಗಾವಿ: ಜಿಲ್ಲೆಯ ವಿವಿಧೆಡೆ ಬುಧವಾರವೂ ಮಳೆ ಮುಂದುವರಿದಿದೆ. ಬೆಳಗಾವಿ, ಬೈಲಹೊಂಗಲ, ಹಿರೇಬಾಗೇವಾಡಿ ಸೇರಿದಂತೆ ವಿವಿಧೆಡೆ ಮಳೆ ಸುರಿಯುತ್ತಿದೆ.

ಚಿಕ್ಕೋಡಿ ತಾಲ್ಲೂಕಿನಲ್ಲಿ ‌ಮತ್ತು ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಸುರಿಯುತ್ತಿದ್ದ ಮಳೆಯ ಅಬ್ಬರ ತಗ್ಗಿದೆ.

ಇದರಿಂದಾಗಿ ಕೃಷ್ಣಾ ಮತ್ತು ಉಪನದಿಗಳ ನೀರಿನ ಮಟ್ಟದಲ್ಲಿ ಯಥಾಸ್ಥಿತಿಯಲ್ಲಿದೆ. ರಾಜಾಪುರ ಬ್ಯಾರೇಜ್ 74,900 ಕ್ಯುಸೆಕ್ ಹಾಗೂ ದೂಧಗಂಗಾ ನದಿಯಿಂದ 17,424 ಸೇರಿದಂತೆ ತಾಲ್ಲೂಕಿನ ಕಲ್ಲೋಳ ಬಳಿ‌ ಕೃಷ್ಣಾ ನದಿಗೆ ಒಟ್ಟು 92,324 ಕ್ಯುಸೆಕ್ ನೀರು ಹರಿದು ಬರುತ್ತಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.