
ಪ್ರಜಾವಾಣಿ ವಾರ್ತೆಪ್ರಾತಿನಿಧಿಕ ಚಿತ್ರ
ಗೋಕಾಕ (ಬೆಳಗಾವಿ ಜಿಲ್ಲೆ): ಇಲ್ಲಿನ ಅಂಬೇಡ್ಕರ್ ನಗರದ ನಿವಾಸಿ ಕಾಟೆಪ್ಪ ದುರಗಪ್ಪ ಶಿರಹಟ್ಟಿ (52) ಅವರು ಮಂಗಳವಾರ ಸಂಜೆ ಚರಂಡಿಯಲ್ಲಿ ಬಿದ್ದು ಕೊಚ್ಚಿಕೊಂಡು ಹೋಗಿದ್ದಾರೆ.
ಧಾರಾಕಾರ ಮಳೆಯಿಂದಾಗಿ ಬೃಹತ್ ಚರಂಡಿಯಲ್ಲಿ ನೀರು ಹರಿಯುತ್ತಿತ್ತು. ಕಾಟೆಪ್ಪ ಅವರು ಚರಂಡಿ ಮೇಲೆ ನಡೆದುಕೊಂಡು ಹೊರಟಾಗ ಆಯತಪ್ಪಿ ಬಿದ್ದರು.
ಹತ್ತಿರದಲ್ಲಿದ್ದವರು ಅವರನ್ನು ಕಾಪಾಡಲು ಯತ್ನಿಸಿದರೂ ಸಾಧ್ಯವಾಗಲಿಲ್ಲ. ಕೆಲವೇ ನಿಮಿಷಗಳಲ್ಲಿ ಕಾಟೆಪ್ಪ ದೂರ ತೇಲಿಕೊಂಡು ಹೋದರು. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ನಡೆಸಿದರು. ಮಳೆಯ ಕಾರಣ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಬೆಳಿಗ್ಗೆ ಮತ್ತೆ ಆರಂಭಿಸಲಾಗುವುದು ಎಂದು ಗೋಕಾಕ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.