
ಕರ್ನಾಟಕ ರಾಜ್ಯೋತ್ಸವ
ಬೆಳಗಾವಿ: ಬೆಳಗಾವಿಯಲ್ಲಿ ಆಚರಿಸಲಾಗುವ ಕರ್ನಾಟಕ ರಾಜ್ಯೋತ್ಸವಕ್ಕೆ ಇದೇ ಮೊದಲ ಬಾರಿಗೆ ಸರ್ಕಾರದಿಂದ ₹50 ಲಕ್ಷ ಅನುದಾನ ಬಿಡುಗಡೆ ಮಾಡಲಾಗಿದೆ.
ಕಾನೂನು, ಪ್ರವಾಸೋದ್ಯಮ ಹಾಗೂ ಗಡಿ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ ಅವರ ವಿಶೇಷ ಪ್ರಯತ್ನದ ಫಲವಾಗಿ ಪ್ರವಾಸೋದ್ಯಮ ಇಲಾಖೆಯಿಂದ, ವಿಶೇಷ ಪ್ರಕರಣವೆಂದು ಪರಿಗಣಿಸಿ ಈ ಅನುದಾನ ಬಿಡುಗಡೆ ಮಾಡಲಾಗಿದೆ.
ಬೆಳಗಾವಿ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಹಾಗೂ ಇತರ ವಿವಿಧ ಕನ್ನಡ ಸಂಘಟನೆಗಳ 25ಕ್ಕೂ ಹೆಚ್ಚು ಪ್ರಮುಖರು ಬೆಂಗಳೂರಿನಲ್ಲಿ ಈಚೆಗೆ ಸಚಿವ ಎಚ್.ಕೆ.ಪಾಟೀಲ ಅವರಿಗೆ ಮನವಿ ಮಾಡಿದ್ದರು.
‘ಅಖಂಡ ಕರ್ನಾಟಕ ರಚನೆಯಾಗಿ 70 ವರ್ಷಗಳ ಅವಧಿಯಲ್ಲಿ ಯಾವುದೇ ಸರ್ಕಾರ ರಾಜ್ಯೋತ್ಸವಕ್ಕೆ ಅನುದಾನ ನೀಡಿರಲಿಲ್ಲ. ಸಂಪ್ರದಾಯದಂತೆ ₹1 ಲಕ್ಷ ಮಾತ್ರ ಜಿಲ್ಲಾಡಳಿತ ನೀಡುತ್ತಿತ್ತು. ಬೆಳಗಾವಿಯಲ್ಲಿ ಆಚರಿಸುವ ರಾಜ್ಯೋತ್ಸವ ಇಡೀ ರಾಜ್ಯಕ್ಕೆ ಮಾದರಿಯಾಗಿದೆ. ಇದಕ್ಕೆ ಮತ್ತಷ್ಟು ಇಂಬು ನೀಡಿದ ಸಚಿವರ ನಡೆಯಿಂದ ಗಡಿ ಕನ್ನಡಿಗರಲ್ಲಿ ಚೈತನ್ಯ ಮೂಡಿದೆ’ ಎಂದು ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.