ADVERTISEMENT

ಬೆಳಗಾವಿ | ಸಾಮೂಹಿಕ ಅತ್ಯಾಚಾರ ಪ್ರಕರಣ: ಆರೋಪಿಗಳು ನ್ಯಾಯಾಂಗ ಬಂಧನಕ್ಕೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 23:30 IST
Last Updated 2 ಜೂನ್ 2025, 23:30 IST
ಕೋರ್ಟ್ (ಸಾಂದರ್ಭಿಕ ಚಿತ್ರ)
ಕೋರ್ಟ್ (ಸಾಂದರ್ಭಿಕ ಚಿತ್ರ)   

ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ಸಾಮೂಹಿಕವಾಗಿ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಬಂಧಿತರಾದ  ಮೂವರು ಆರೋಪಿಗಳನ್ನು ಪೋಕ್ಸೊ ವಿಶೇಷ ನ್ಯಾಯಾಲಯದ ಎದುರು ಮತ್ತು ಇಬ್ಬರು ಬಾಲ ನ್ಯಾಯಮಂಡಳಿ ಎದುರು ಸೋಮವಾರ ಹಾಜರುಪಡಿಸಲಾಯಿತು.

ನ್ಯಾಯಾಂಗ ಬಂಧನದ ಆದೇಶದ ಹಿನ್ನೆಲೆಯಲ್ಲಿ ಮೂವರು ಆರೋಪಿಗಳನ್ನು ಹಿಂಡಲಗಾ ಕೇಂದ್ರ ಕಾರಾಗೃಹಕ್ಕೆ ಮತ್ತು ಇಬ್ಬರು ಬಾಲಕರನ್ನು ಬಾಲ ಭವನಕ್ಕೆ ಕಳುಹಿಸಲಾಯಿತು. ಎಪಿಎಂಸಿ ಠಾಣೆ ಪೊಲೀಸರು ತನಿಖೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT