
ಪ್ರಜಾವಾಣಿ ವಾರ್ತೆ
ಬೆಳಗಾವಿ: ಮಹಾರಾಷ್ಟ್ರ ರಾಜ್ಯ ಪಠ್ಯಪುಸ್ತಕ ನಿರ್ಮಿತಿ ಮತ್ತು ಅಭ್ಯಾಸ ಸಂಶೋಧನಾ ಮಂಡಳಿಯ (ಬಾಲ ಭಾರತಿ) ಕನ್ನಡ ವಿಭಾಗದ ವಿಶೇಷ ಅಧಿಕಾರಿಯಾಗಿ ಸುದೀರ್ಘ ಅವಧಿ ಕಾರ್ಯನಿರ್ವಹಿಸಿದ್ದ ಸದಾನಂದ ಬಿಳೂರ (59) ಅವರು ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ನಿಧನರಾದರು.
ಅವರಿಗೆ ಪತ್ನಿ, ಪುತ್ರಿ ಇದ್ದಾರೆ. ಅಂತ್ಯಕ್ರಿಯೆ ಸಂಜೆ ನಡೆಯಿತು. ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಮೂಲದವರಾದ ಅವರು, ಏಳು ತಿಂಗಳ ಹಿಂದೆ ನಿವೃತ್ತರಾಗಿದ್ದರು. ಬೆಳಗಾವಿಯಲ್ಲಿ ಕುಟುಂಬದೊಂದಿಗೆ ವಾಸವಾಗಿದ್ದರು. ಕೆಲ ದಿನಗಳ ಹಿಂದೆ ಕಾಯಿಲೆ ಬಂದ ಕಾರಣ ಆಸ್ಪತ್ರೆ ಸೇರಿದ್ದರು.
ಕನ್ನಡದ ಜಾಗೃತಿ ಮೂಡಿಸುವಲ್ಲಿ ಅವಿರತ ಶ್ರಮಿಸಿದ್ದ ಅವರು, ಮಹಾರಾಷ್ಟ್ರದಲ್ಲಿ ‘ಕನ್ನಡ ಕಾಯಕಯೋಗಿ’ ಎಂದೇ ಹೆಸರಾಗಿದ್ದರು. ಮಹಾರಾಷ್ಟ್ರ ಗಡಿಯಲ್ಲಿ ಕನ್ನಡಿಗರ ಹೋರಾಟ, ಒಗ್ಗಟ್ಟಿಗೆ ಶ್ರಮಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.