
ವಿಧಾನಸಭೆ– ಪ್ರಶ್ನೋತ್ತರ
ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ, ಈಗಾಗಲೆ ಅಭ್ಯರ್ಥಿಗಳ ತರಬೇತಿ ನಡೆಯುತ್ತಿದ್ದು, ಮೂರು ತಿಂಗಳ ಒಳಗಾಗಿ ಖಾಲಿ ಇರುವ ಸ್ಥಳಗಳಲ್ಲಿ ನೇಮಕ ಮಾಡಲಾಗುವುದು. 3,600 ಪೊಲೀಸ್ ಕಾನ್‌ಸ್ಟೆಬಲ್‌ಗಳ ನೇಮಕಾತಿಯ ಪ್ರಸ್ತಾವಕ್ಕೆ ಆರ್ಥಿಕ ಇಲಾಖೆ ಅನುಮತಿ ನೀಡಿದೆ.
–ಗೃಹ ಸಚಿವ ಜಿ. ಪರಮೇಶ್ವರ (ಬಿಜೆಪಿಯ ಉಮಾನಾಥ ಕೋಟ್ಯಾನ್ ಪ್ರಶ್ನೆ)
ಹೆಚ್ಚಿನ ಆದಾಯ ಸಂಗ್ರಹಿಸಲು ಇಂತಿಷ್ಟೇ ಪ್ರಮಾಣದಲ್ಲಿ ಮದ್ಯ ಮಾರಾಟ ಮಾಡಬೇಕು ಎಂಬ ಯಾವುದೇ ಗುರಿ ನೀಡಿಲ್ಲ. ಕಳೆದ ಮೂರು ವರ್ಷಗಳಲ್ಲಿ ರಾಜ್ಯದಲ್ಲಿ 721 ಅಬಕಾರಿ ದಾಳಿ ನಡೆಸಿ, 491 ಪ್ರಕರಣಗಳನ್ನು ದಾಖಲಿಸಿದ್ದು, 448 ಜನರನ್ನು ಬಂಧಿಸಲಾಗಿದೆ. 641 ಲೀಟರ್ ಅಕ್ರಮ ಮದ್ಯ ವಶಪಡಿಸಿಕೊಂಡಿದ್ದು, 16 ವಾಹನಗಳನ್ನು ಜಪ್ತಿ ಮಾಡಿ ₹ 12.69 ಲಕ್ಷ ದಂಡ ವಿಧಿಸಲಾಗಿದೆ. ಅಕ್ರಮ ಮದ್ಯ ಮಾರಾಟ ತಡೆಗಟ್ಟಲು ಇನ್ನಷ್ಟು ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು
–ಅಬಕಾರಿ ಸಚಿವ ಆರ್.ಬಿ. ತಿಮ್ಮಾಪುರ (ಪ್ರಶ್ನೆ–ಜೆಡಿಎಸ್‌ನ ಸಿ.ಬಿ. ಸುರೇಶ್‌ಬಾಬು)
2024-25ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿ, ಮಂಗಳೂರು, ನರಿಂಗಾಣ, ಮೂಡಬಿದಿರೆ, ಐಕಳ, ಜಪ್ಪು, ಪುತ್ತೂರು, ಬಂಟ್ವಾಳ, ಉಪ್ಪಿನಂಗಡಿ ಮತ್ತು ವೇಣೂರಿನಲ್ಲಿ ಆಯೋಜಿಸಿದ್ದ ಕಂಬಳೋತ್ಸವಗಳಿಗೆ ತಲಾ ₹ 5 ಲಕ್ಷದಂತೆ ಒಟ್ಟು ₹ 50 ಲಕ್ಷ ಬಿಡುಗಡೆ ಮಾಡಲಾಗಿದೆ. 2025–26ನೇ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ 23 ಕಂಬಳೋತ್ಸವಗಳಿಗೆ ತಲಾ ₹ 5 ಲಕ್ಷ ಅನುದಾನ ಬಿಡುಗಡೆ ಮಾಡಲಾಗುವುದು
–ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ (ಪ್ರಶ್ನೆ– ಕಾಂಗ್ರೆಸ್‌ನ ಅಶೋಕ ಕುಮಾರ್ ರೈ)
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.