ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ: 723 ವಿದ್ಯಾರ್ಥಿಗಳು ಗೈರುಹಾಜರು

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 13:46 IST
Last Updated 21 ಸೆಪ್ಟೆಂಬರ್ 2020, 13:46 IST

ಬೆಳಗಾವಿ: ಜಿಲ್ಲೆಯಾದ್ಯಂತ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ಸೋಮವಾರ ಆರಂಭವಾಯಿತು.

‘ಮೊದಲ ದಿನ ನಿಗದಿಯಾಗಿದ್ದ ಗಣಿತ ವಿಷಯದ ಪರೀಕ್ಷೆ ಸುಗಮವಾಗಿ ನಡೆಯಿತು. ಬೆಳಗಾವಿ ಹಾಗೂ ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಗಳಲ್ಲಿ 723 ವಿದ್ಯಾರ್ಥಿಗಳು ಗೈರು ಹಾಜರಾದರು. ಯಾರೂ ಡಿಬಾರ್‌ ಆಗಿಲ್ಲ’ ಎಂದು ಡಿಡಿಪಿಐಗಳಾದ ಎ.ಬಿ. ಪುಂಡಲೀಕ ಮತ್ತು ಗಜಾನನ ಮನ್ನಿಕೇರಿ ತಿಳಿಸಿದರು.

‘ಚಿಕ್ಕೋಡಿ ಜಿಲ್ಲೆಯಲ್ಲಿ 9,413 ವಿದ್ಯಾರ್ಥಿಗಳು ನೋಂದಾಯಿಸಿದ್ದರು. ಈ ಪೈಕಿ 8,959 ಮಂದಿ ಹಾಜರಾದರು. ಬೆಳಗಾವಿ ಜಿಲ್ಲೆಯಲ್ಲಿ ನೋಂದಾಯಿಸಿದ್ದ 7,566 ವಿದ್ಯಾರ್ಥಿಗಳಲ್ಲಿ 269 ಮಂದಿ ಗೈರು ಹಾಜರಾದರು’ ಎಂದು ಮಾಹಿತಿ ನೀಡಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.