
ಸಾವು
(ಪ್ರಾತಿನಿಧಿಕ ಚಿತ್ರ)
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಸಮೀಪದ ಮರಕುಂಬಿ ಗ್ರಾಮದ ಬಳಿ ಇರುವ ಇನಾಮದಾರ ಸಕ್ಕರೆ ಕಾರ್ಖಾನೆ ದುರಂತದಲ್ಲಿ ಗಾಯಗೊಂಡಿದ್ದ ಇನ್ನೂ ಐವರು ಕಾರ್ಮಿಕರು ಗುರುವಾರ ಮೃತಪಟ್ಟಿದ್ದು, ಮೃತರ ಸಂಖ್ಯೆ 8ಕ್ಕೆ ಏರಿದೆ. ಕಾರ್ಖಾನೆಯಲ್ಲಿ ಬುಧವಾರ ಕುದಿಯುವ ಪದಾರ್ಥ ಸುರಿದು ಒಟ್ಟು ಎಂಟು ಮಂದಿ ಕಾರ್ಮಿಕರು ಗಾಯಗೊಂಡಿದ್ದರು. ಮೂವರು ಮೃತಪಟ್ಟಿದ್ದರು.
‘ಗೋಕಾಕ ತಾಲ್ಲೂಕಿನ ಗೊಡಚಿನ ಮಲ್ಕಿ ಗ್ರಾಮದ ಭರತ್ ಬಸಪ್ಪ ಸಾರವಾಡಿ (27), ಬೈಲಹೊಂಗಲ ತಾಲ್ಲೂಕಿನ ಅರವಳ್ಳಿ ಗ್ರಾಮದ ಮಂಜುನಾಥ ಮಡಿವಾಳಪ್ಪ ಕಾಜಗಾರ್ (28), ಬಾಗಲಕೋಟೆ ಮರೆಗುದ್ದಿ ಗ್ರಾಮದ ಗುರುನಾಥ ಭೀರಪ್ಪ ತಮ್ಮಣ್ಣವರ (38) ಮತ್ತು ಅಥಣಿ ತಾಲ್ಲೂಕಿನ ಹೂಲಿಕಟ್ಟಿ ಮಂಜುನಾಥ ಗೋಪಾಲ ತೇರದಾಳ (31), ಗೋಕಾಕ ತಾಲ್ಲೂಕಿನ ಗಿಳಿಹೊಸೂರ ಗ್ರಾಮದ ರಾಘವೇಂದ್ರ ಮಲ್ಲಪ್ಪ ಗಿರಿಯಾಳ (36) ಗುರುವಾರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ. ‘ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯವೇ ದುರಂತಕ್ಕೆ ಕಾರಣ’ ಎಂದು ಮೃತರ ಕುಟುಂಬದವರು ಆರೋಪಿಸಿದ್ದಾರೆ. ಮುರಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.