ADVERTISEMENT

ಬೆಳಗಾವಿ:ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಗೆ KLEಸಂಸ್ಥೆಯಿಂದ ಉಚಿತವಾಗಿ ವೈದ್ಯರ ಸೇವೆ

​ಪ್ರಜಾವಾಣಿ ವಾರ್ತೆ
Published 26 ಆಗಸ್ಟ್ 2025, 13:31 IST
Last Updated 26 ಆಗಸ್ಟ್ 2025, 13:31 IST
<div class="paragraphs"><p>ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿನ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಿಮ್ಸ್‌ ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ, ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಪ್ರಭಾಕರ ಕೋರೆ, ಶಾಸಕ ಆಸಿಫ್ ಸೇಠ್ ಇದ್ದರು</p></div>

ಬೆಳಗಾವಿ ಜಿಲ್ಲಾಸ್ಪತ್ರೆ ಆವರಣದಲ್ಲಿನ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಬಿಮ್ಸ್‌ ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ, ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು. ಪ್ರಭಾಕರ ಕೋರೆ, ಶಾಸಕ ಆಸಿಫ್ ಸೇಠ್ ಇದ್ದರು

   

ಬೆಳಗಾವಿ: ಜಿಲ್ಲಾಸ್ಪತ್ರೆ ಆವರಣದಲ್ಲಿನ ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞವೈದ್ಯರ ಉಚಿತ ಸೇವೆಗಾಗಿ ಕೆಎಲ್ಇ ಸಂಸ್ಥೆಯ ಪ್ರಭಾಕರ ಕೋರೆ ಆಸ್ಪತ್ರೆ ಜೊತೆ ಮಂಗಳವಾರ ಒಡಂಬಡಿಕೆ ಪ್ರಕ್ರಿಯೆ ನಡೆಯಿತು.

ಶಾಸಕ ಆಸಿಫ್ ಸೇಠ್, ಕೆಎಲ್‌ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಅವರ ಸಮ್ಮುಖದಲ್ಲಿ ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಬಿಮ್ಸ್) ನಿರ್ದೇಶಕ ಡಾ.ಅಶೋಕಕುಮಾರ ಶೆಟ್ಟಿ ಮತ್ತು ಪ್ರಭಾಕರ ಕೋರೆ ಆಸ್ಪತ್ರೆ ವೈದ್ಯಕೀಯ ನಿರ್ದೇಶಕ ಡಾ.ಎಂ.ದಯಾನಂದ ಒಡಂಬಡಿಕೆ ಪತ್ರಗಳನ್ನು ವಿನಿಮಯ ಮಾಡಿಕೊಂಡರು.

ADVERTISEMENT

ಈ ಸಂದರ್ಭದಲ್ಲಿ ಪ್ರಭಾಕರ ಕೋರೆ ಮಾತನಾಡಿ, ‘ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡ ಸಿದ್ಧವಾಗಿ ಎರಡು ವರ್ಷವಾದರೂ ತಜ್ಞವೈದ್ಯರು ಇರಲಿಲ್ಲ. ಅದಕ್ಕೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ, ಆರೋಗ್ಯ ಸಚಿವ ದಿನೇಶ ಗುಂಡೂರಾವ್‌ ಅವರೊಂದಿಗೆ ಚರ್ಚಿಸಿದೆವು. ಸರ್ಕಾರವು ತಜ್ಞವೈದ್ಯರನ್ನು ನೇಮಿಸುವವರೆಗೆ ಖಾಲಿ ಹುದ್ದೆಗಳು ಇರುವ 12 ವಿಭಾಗಗಳಿಗೆ ತಜ್ಞವೈದ್ಯರ ಸೇವೆಯನ್ನು ಉಚಿತವಾಗಿ ಒದಗಿಸುತ್ತೇವೆ’ ಎಂದರು.

ಆಸಿಫ್‌ ಸೇಠ್‌ ಮಾತನಾಡಿ,‘ಸರ್ಕಾರವು ಸೂಪರ್‌ಸ್ಪೆಷಾಲಿಟಿ ಆಸ್ಪತ್ರೆಗೆ ₹ 30 ಕೋಟಿ ವೆಚ್ಚದ ಉಪಕರಣಗಳನ್ನು ಒದಗಿಸಿದೆ. ಇನ್ನೂ ₹38 ಕೋಟಿ ವೆಚ್ಚದ ಇತರ ಉಪಕರಣಗಳು ಲಭ್ಯವಾಗಲಿವೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.