ADVERTISEMENT

ಬೆಳಗಾವಿ: ಸವಲತ್ತುಗಳಿಗಾಗಿ ಸಾರಿಗೆ ನೌಕರರ ಮುಷ್ಕರ

​ಪ್ರಜಾವಾಣಿ ವಾರ್ತೆ
Published 11 ಡಿಸೆಂಬರ್ 2020, 4:00 IST
Last Updated 11 ಡಿಸೆಂಬರ್ 2020, 4:00 IST
   

ಬೆಳಗಾವಿ: ತಮ್ಮನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಸವಲತ್ತುಗಳನ್ನು ಒದಗಿಸಬೇಕು ಎಂದು ಆಗ್ರಹಿಸಿ ಸಾರಿಗೆ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ಕೆಲಸದಿಂದ ದೂರ ಉಳಿದು ಧರಣಿ ನಡೆಸುತ್ತಿದ್ದಾರೆ. ಬೇಡಿಕೆ ಈಡೇರಿಸುವವರೆಗೂ ಹೋರಾಟ ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ. ಇದರಿಂದಾಗಿ ಬಸ್ ಗಳ ಕಾರ್ಯಾಚರಣೆ ಸ್ಥಗಿತಗೊಂಡಿದ್ದು, ಪ್ರಯಾಣಿಕರು ಪರದಾಡುತ್ತಿದ್ದಾರೆ. ಆರ್ ಸಿ ಯು ಮೊದಲಾದ ಕಡೆಗಳಿಗೆ ಹೋಗಬೇಕಾದ ವಿದ್ಯಾರ್ಥಿಗಳು ಸೇರಿ ಹಲವರು ಬಸ್ ಗಳಿಲ್ಲದೆ ತೊಂದರೆ ಅನುಭವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT