ADVERTISEMENT

ಬೆಳಗಾವಿ | ಪರಿಷತ್ ಚುನಾವಣೆ: ಮತದಾರರ ಅಂತಿಮ‌ಪಟ್ಟಿ ಪ್ರಕಟ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2021, 16:26 IST
Last Updated 21 ನವೆಂಬರ್ 2021, 16:26 IST
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್
ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್    

ಬೆಳಗಾವಿ: ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಡಿ.10ರಂದು ನಡೆಯಲಿರುವ ಚುನಾವಣೆಗೆ ಸಂಬಂಧಿಸಿದಂತೆ 511 ಮತಗಟ್ಟೆಗಳಲ್ಲಿನ ಮತದಾರರ ಅಂತಿಮ‌ಪಟ್ಟಿಯನ್ನು ಭಾನುವಾರ ಪ್ರಕಟಿಸಲಾಗಿದೆ ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ್ ತಿಳಿಸಿದ್ದಾರೆ.

‘ಕರಡು ಪಟ್ಟಿಯನ್ನು ನ.11ರಂದು ಪ್ರಕಟಿಸಲಾಗಿತ್ತು. ಸಾರ್ವಜನಿಕರ ಆಕ್ಷೇಪಣೆಗಳನ್ನು ಆಧರಿಸಿ ಸರಿಪಡಿಸಲಾಗಿರುವ ಮತದಾರರ ಅಂತಿಮ ಪಟ್ಟಿಯನ್ನು ಈಗ ಪ್ರಕಟಿಸಲಾಗಿದೆ. ಪಟ್ಟಿಗಳು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳು, ನಗರ ಸ್ಥಳೀಯ ಸಂಸ್ಥೆಗಳು, ಜಿಲ್ಲಾಧಿಕಾರಿ, ಜಿಲ್ಲಾ ಪಂಚಾಯಿತಿ ಸಿಇಒ, ಜಿಲ್ಲೆಯ ಮೂರೂ ಉಪವಿಭಾಗಾಧಿಕಾರಿಗಳು, ತಾಲ್ಲೂಕು ಪಂಚಾಯಿತಿ ಹಾಗೂ ತಹಶೀಲ್ದಾರ್‌ ಕಚೇರಿಗಳಲ್ಲಿ ಲಭ್ಯ ಇರುತ್ತವೆ’ ಎಂದು ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.

ಪರಿಷ್ಕರಣೆ ಪ್ರಕ್ರಿಯೆ ವೀಕ್ಷಿಸಿದ ಜಿಲ್ಲಾಧಿಕಾರಿ

ADVERTISEMENT

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಪ್ರಕ್ರಿಯೆಯನ್ನು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ್ ಪರಿಶೀಲಿಸಿದರು.

ಇಲ್ಲಿನ ರಾಮನಗರ, ಅಶೋಕ ನಗರ ಸೇರಿದಂತೆ ವಿವಿಧ ಮತಗಟ್ಟೆ ಕೇಂದ್ರಗಳಿಗೆ ಭಾನುವಾರ ಭೇಟಿ ನೀಡಿ ಪರಿಷ್ಕರಣೆಗೆ ಸಂಬಂಧಿಸಿದಂತೆ ಮಾಹಿತಿ ಪಡೆದರು.

‘ಮತದಾರರ ಹೆಸರು ಸೇರ್ಪಡೆ, ತಿದ್ದುಪಡಿ, ಒಂದು ಮತಕ್ಷೇತ್ರದಿಂದ ಇನ್ನೊಂದು ಮತಕ್ಷೇತ್ರಕ್ಕೆ ವರ್ಗಾವಣೆ ಸೇರಿದಂತೆ ಪ್ರತಿಯೊಂದು ಪರಿಷ್ಕರಣೆ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಸೂಚಿಸಿದರು.

‘ನಿಗದಿತ ನಮೂನೆಗಳಲ್ಲಿ ಮಾಹಿತಿ ಪಡೆದು ಪಟ್ಟಿ ಪರಿಷ್ಕರಿಸಬೇಕು. ಆಯಾ ಮತಗಟ್ಟೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ನಿಯೋಜಿತರಾಗಿರುವ ಸಿಬ್ಬಂದಿ ಮನೆ–ಮನೆಗಳಿಗೆ ಭೇಟಿ ನೀಡಿ, ದೋಷರಹಿತ ಪಟ್ಟಿ ಸಿದ್ಧಪಡಿಸಬೇಕು’ ಎಂದು ತಿಳಿಸಿದರು.

ಮಹಾನಗರಪಾಲಿಕೆಯ ಅಧಿಕಾರಿ ಪೀರಜಾದೆ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.