ಯರಗಟ್ಟಿ: ‘ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕುರಿತು ಜನರಿಗೆ ಅಪಾರ ಗೌರವವವಿದೆ. ಗ್ರಾಮೀಣ ಮಹಿಳೆಯರಿಗೆ ಬೆಳಕಾದ ಈ ಸಂಸ್ಥೆಯ ಜನಪರ ಯೋಜನೆಗಳಿಂದಾಗಿ ಸದಸ್ಯರು ಸ್ವಾವಲಂಬಿಗಳಾಗಿ ಬದುಕುವಂತಾಗಿದೆ. ಸಾರ್ವಜನಿಕರ ಅಭಿವೃದ್ಧಿ ಜೊತೆಗೆ ಶಿಕ್ಷಣಕ್ಕೂ ಹೆಚ್ಚಿನ ಒತ್ತು ನೀಡುತ್ತದೆ’ ಎಂದು ಯರಗಟ್ಟಿಯ ನಿಲಯಪಾಲಕಿ ಆಶಾ ಪರೀಟ್ ಹೇಳಿದರು.
ಪಟ್ಟಣದ ರತ್ನ ಸಂಗಮ ಸಭಾಭವನದಲ್ಲಿ ಈಚೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ ಟ್ರಸ್ಟ್ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಕೇಂದ್ರ ಒಕ್ಕೂಟ ಪದಾಧಿಕಾರಿಗಳ ಸಮಾವೇಶ ಉದ್ಘಾಟಿಸಿ ಮಾತನಾಡಿದರು.
ದಾನಮ್ಮ ಅಂಗಡಿ, ರಶ್ಮಿ ವಿ, ಎಚ್.ಆರ್ ಲವಕುಮಾರ, ಶ್ರೀಕಾಂತ ಉಡಪ, ಸಿದ್ದಾರೂಡ, ನಾಯ್ಕ ಸರ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.