
ಬೈಲಹೊಂಗಲ ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ– 2026 ಜಾನಪದ ಕಲಾವಾಹಿನಿ ಮೆರವಣಿಗೆಯನ್ನು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಶಾ
ಬೈಲಹೊಂಗಲ: ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ 2026ರ ಜಾನಪದ ಕಲಾವಾಹಿನಿಗೆ ಶನಿವಾರ ಅದ್ದೂರಿಯಾಗಿ ಚಾಲನೆ ನೀಡಲಾಯಿತು.
ಗ್ರಾಮದ ಮಲ್ಲಮ್ಮ ವೃತ್ತದಲ್ಲಿ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್, ಶಾಸಕ ಮಹಾಂತೇಶ ಕೌಜಲಗಿ ಬೆಳವಡಿ ಸಂಸ್ಥಾನ ಧ್ವಜಾರೋಹಣ ನೆರವೇರಿಸಿದರು. ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ, ಉಪವಿಭಾಗಾಧಿಕಾರಿ ಪ್ರವೀಣ ಜೈನ್, ತಹಶೀಲ್ದಾರ ಹನುಮಂತ ಶೀರಹಟ್ಟಿ ಡೊಳ್ಳು ಬಾರಿಸುವ ಮೂಲಕ ಜಾನಪದ ಕಲಾ ಮೇಳಕ್ಕೆ ಚಾಲನೆ ನೀಡಿದರು. ಕಲಾ ತಂಡಗಳ ಮೆರವಣಿಗೆಯು ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಮರಳಿ ಮಲ್ಲಮ್ಮ ವೃತ್ತಕ್ಕೆ ಬಂದು ತಲುಪಿತು.
ಜನಾಕರ್ಷಿಸಿದ ಜಾನಪದ ಕಲಾವಾಹಿನಿ:
ಜಾನಪದ ಕಲಾ ವಾಹಿನಿಯಲ್ಲಿ ಪ್ರತಿಯೊಂದು ಕಲಾ ತಂಡ ನೋಡುಗರಿಗೆ ಕಲಾ ರಸದೌತಣ ಉಣಬಡಿಸಿತು. ಗ್ರಾಮದ ಆದರ್ಶ ಶಿಕ್ಷಣ ಸಂಸ್ಥೆ ಸೇರಿದಂತೆ, ವಿವಿಧ ಶಾಲಾ ವಿದ್ಯಾರ್ಥಿಗಳಿಂದ ರೂಪಕ ಗಮನ ಸೆಳೆಯಿತು. ದಾರಿಯುದ್ದಕ್ಕೂ ಕಲಾ ತಂಡಗಳಿಗೆ ಮಜ್ಜಿಗೆ, ಬದಾಮ ಹಾಲು ವಿತರಿಸಲಾಯಿತು.
25 ಕ್ಕೂ ಹೆಚ್ಚು ಕಲಾ ತಂಡಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು. ಗ್ರಾಮಸ್ಥರು ಹಣೆಗೆ ತಿಲಕ, ಪೇಠ ತೊಟ್ಟು ಮೆರವಣಿಗೆಯಲ್ಲಿ ಸಾಗಿದರು. ಸುಮಂಗಲೆಯರು ಪೂರ್ಣಕುಂಭ ಹೊತ್ತು ಸಾಗಿ ಮೆರುಗು ಹೆಚ್ಚಿಸಿದರು.
ಪ್ರೊಬೇಷನರಿ ಎಸ್‌ಪಿ ಡಾ.ಬಾನು ಪ್ರಕಾಶ, ಸಿಪಿಐ ಶಿವಾನಂದ ಗುಡಗನಟ್ಟಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಪಿಎಸ್‌ಐಗಳಾದ ಎಚ್.ಕೆ.ಪಾಟೀಲ, ಗಂಗಾಧರ ಹಂಪಣ್ಣವರ, ಪಿಡಿಒ ಮುತ್ತು ಬರಗಿ, ಚಂದ್ರಶೇಖರಯ್ಯ ಕಾರಿಮನಿ, ಶ್ರೀಶೈಲ ಬೋಳನ್ನವರ, ಸವಿತಾ ಪಾಟೀಲ, ಪ್ರಕಾಶ ಹುಂಬಿ, ಈರಣ್ಣ ಕರೀಕಟ್ಟಿ, ಸುನೀಲ ವರ್ಣೇಕರ ಹಾಗೂ ಸದಸ್ಯರು, ಯುವಕ ಸಂಘಟನೆಗಳ ಪದಾಧಿಕಾರಿಗಳು, ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು, ಮಹಿಳಾ ಸ್ತ್ರೀಶಕ್ತಿ ಸಂಘಟನೆ ಸದಸ್ಯರು, ಶಾಲಾ, ಕಾಲೇಜು ವಿದ್ಯಾರ್ಥಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಇದ್ದರು.
ವೀರರಾಣಿ ಬೆಳವಡಿ ಮಲ್ಲಮ್ಮಳ ಶೌರ್ಯ ಸಾಹಸ ಪರಾಕ್ರಮದ ಇತಿಹಾಸ ಸೂರ್ಯ ಚಂದ್ರ ಇರುವವರೆಗೂ ಅಜರಾಮರಬಸವಜಯ ಮೃತ್ಯುಂಜಯ ಸ್ವಾಮೀಜಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠ
ಮನ ಸೆಳೆದ ಮೆರವಣಿಗೆ
ಬೈಲಹೊಂಗಲ ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ– 2026 ಜಾನಪದ ಕಲಾವಾಹಿನಿ ಮೆರವಣಿಗೆಯನ್ನು ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಶಾಸಕ ಮಹಾಂತೇಶ ಕೌಜಲಗಿ ಕೆಪಿಸಿಸಿ ಸದಸ್ಯೆ ರೋಹಿಣಿ ಪಾಟೀಲ ಜಿಲ್ಲಾಧಿಕಾರಿ ಮೊಹಮ್ಮದ ರೋಷನ್ ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ ಉಪವಿಭಾಗಾಧಿಕಾರಿ ಪ್ರವೀಣ ಜೈನ್ ತಹಶೀಲ್ದಾರ್ ಹನುಮಂತ ಶಿರಹಟ್ಟಿ ಉದ್ಘಾಟಿಸಿದರು. ತಾಲ್ಲೂಕಿನ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವದ ಜಾನಪದ ಕಲಾವಾಹಿನಿಯಲ್ಲಿ ಪಾಲ್ಗೊಂಡಿದ್ದ ವಿವಿಧ ಕಲಾ ತಂಡ ಗಮನ ಸೆಳೆದವು. ಮಲ್ಲಮ್ಮ ಶಾಲೆ ವಿದ್ಯಾರ್ಥಿಗಳು ಮಲ್ಲಮ್ಮ ಮಹಿಳಾ ಪಡೆಯಲ್ಲಿ ಪಥಸಂಚಲನ ನಡೆಸಿದರು. ಸ್ಫೂರ್ತಿ ಏಳಜೇರಿ ರಾಜಾ ಈಶಪ್ರಭು ವೇಷದಲ್ಲಿ ಶ್ರೀದೇವಿ ಮಾರಿಹಾಳ ರಾಣಿ ಮಲ್ಲಮ್ಮ ವೇಷದಲ್ಲಿ ಕಂಗೊಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.