ADVERTISEMENT

ವಾರದೊಳಗೆ ಕಾಮಗಾರಿ ನಿಲ್ಲಿಸದಿದ್ದರೆ ಬೆಳಗಾವಿ ಬಂದ್‌: ಕರವೇ ಎಚ್ಚರಿಕೆ

ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರಿಂದ ಎಚ್ಚರಿಕೆ

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 9:11 IST
Last Updated 2 ಜೂನ್ 2025, 9:11 IST
<div class="paragraphs"><p>ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ಮುತ್ತಿಗೆ ಹಾಕಲು ಯತ್ನಿಸಿದರು.</p></div>

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ಸೋಮವಾರ ಮುತ್ತಿಗೆ ಹಾಕಲು ಯತ್ನಿಸಿದರು.

   

ಪ್ರಜಾವಾಣಿ ಚಿತ್ರ

ಬೆಳಗಾವಿ: ‘ಹಿಡಕಲ್‌ ಜಲಾಶಯದಿಂದ ಹುಬ್ಬಳ್ಳಿ–ಧಾರವಾಡ ಕೈಗಾರಿಕೆಗಳಿಗೆ ನೀರು ನೀಡುವ ಕಾಮಗಾರಿಯನ್ನು ಸ್ಥಗಿತಗೊಳಿಸಬೇಕು’ ಎಂದು ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ ಬಣ) ಕಾರ್ಯಕರ್ತರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ADVERTISEMENT

ಇಲ್ಲಿನ ರಾಣಿ ಚನ್ನಮ್ಮನ ವೃತ್ತದಿಂದ ಮೆರವಣಿಗೆ ನಡೆಸಿದ ಪ್ರತಿಭಟನಕಾರರು, ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಖಾಲಿ ಕೊಡಗಳನ್ನು ಪ್ರದರ್ಶಿಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

‘ವಾರದೊಳಗೆ ಸರ್ಕಾರ ಕಾಮಗಾರಿ ಸ್ಥಗಿತಗೊಳಿಸದಿದ್ದರೆ, ನಾವೇ ಕಾಮಗಾರಿ ಸ್ಥಳಕ್ಕೆ ಹೋಗಿ ಸ್ಥಗಿತಗೊಳಿಸುತ್ತೇವೆ. ಬೆಳಗಾವಿ ಜಿಲ್ಲೆ ಬಂದ್‌ಗೆ ಕರೆ ಕೊಡುತ್ತೇವೆ’ ಎಂದು ಎಚ್ಚರಿಕೆ ಕೊಟ್ಟರು.

ಸಂಘಟನೆ ಉತ್ತರ ಕರ್ನಾಟಕದ ಅಧ್ಯಕ್ಷ ಮಹಾಂತೇಶ ರಣಗಟ್ಟಿಮಠ, ‘ಹಿಡಕಲ್‌ ಜಲಾಶಯದಿಂದ ಕೈಗಾರಿಕೆಗೆ ಹನಿ ನೀರು ಬಿಟ್ಟರೂ ದೊಡ್ಡ ಕ್ರಾಂತಿಯಾಗುತ್ತದೆ. ಸರ್ಕಾರಕ್ಕೆ ಬೆಳಗಾವಿ ಮತ್ತು ಬಾಗಲಕೋಟೆ ರೈತರ ಶಕ್ತಿ ಪ್ರದರ್ಶಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ಕೊಟ್ಟರು.

‘ಜಿಲ್ಲಾ ಘಟಕದ ಅಧ್ಯಕ್ಷ ವಾಜೀದ್‌ ಹಿರೇಕೋಡಿ, ಬೆಳಗಾವಿ ಜಿಲ್ಲೆಯ ರೈತರಿಗೆ ಮೊದಲೇ ನೀರಿನ ಸಮಸ್ಯೆ ಇದೆ. ಹಾಗಾಗಿ ಯಾವ ಕಾರಣಕ್ಕೂ ಹು–ಧಾ ಕೈಗಾರಿಕೆಗಳಿಗೆ ನೀರು ಬಿಡಬಾರದು. ವಾರದೊಗೆ ಕಾಮಗಾರಿ ತಡೆಯದಿದ್ದರೆ ಗಂಭೀರ ಪರಿಣಾಮ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಸಿದರು.

ತಮ್ಮ ಬೇಡಿಕೆ ಈಡೇರಿಸುವಂತೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.