ಬೆಟ್ಟಿಂಗ್ (ಸಾಂದರ್ಭಿಕ ಚಿತ್ರ)
ಬೆಳಗಾವಿ: ಇಲ್ಲಿನ ಶಿಂಧಿ ಕಾಲೊನಿಯಲ್ಲಿನ ಐಪಿಎಲ್ ಬೆಟ್ಟಿಂಗ್ ಅಡ್ಡೆಯ ಮೇಲೆ ಭಾನುವಾರ ದಾಳಿ ಮಾಡಿದ ಸಿಇಎನ್ ಪೊಲೀಸರು, ಉದ್ಧವ್ ಜಯರಾಮದಾಸ್ ರೋಚಲಾನಿ (61) ಎಂಬ ಆರೋಪಿಯನ್ನು ಬಂಧಿಸಿದ್ದಾರೆ. ಇನ್ನೊಬ್ಬ ಆರೋಪಿ ಕರಣ್ ರೋಚಲಾನಿ ಸೇರಿ ಇನ್ನೂ ಕೆಲವರು ಪರಾರಿಯಾಗಿದ್ದಾರೆ.
‘ಕಾರ್ಯಾಚರಣೆ ವೇಳೆ 25 ಮೊಬೈಲ್ ಫೋನ್, ಟಿವಿ, ₹2 ಲಕ್ಷ ನಗದು ವಶಪಡಿಸಿಕೊಳ್ಳಲಾಗಿದೆ. ಪ್ರಕರಣ ದಾಖಲಿಸಿಕೊಳ್ಳಲಾಗಿದ್ದು, ತನಿಖೆ ಮುಂದುವರೆದಿದೆ’ ಎಂದು ಸಿಇಎನ್ ಠಾಣೆ ಪೊಲೀಸರು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.