ಅಂಬೇಡ್ಕರ್ ಭಾವಚಿತ್ರಕ್ಕೆ ಕಪ್ಪು ಬಣ್ಣ ಬಳಿದ ಕಿಡಿಗೇಡಿಗಳು
ಎಂ.ಕೆ.ಹುಬ್ಬಳ್ಳಿ (ಬೆಳಗಾವಿ): ಗಾಂಧಿ ನಗರದ ರಾಷ್ಟ್ರೀಯ ಹೆದ್ದಾರಿ-4 ರ ಪಕ್ಕದಲ್ಲಿರುವ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಸೋಮವಾರ ನಸುಕಿನಲ್ಲಿ ಕಪ್ಪು ಬಣ್ಣ ಬಳಿದಿದ್ದಾರೆ.
ಮಾಹಿತಿ ತಿಳಿಯುತ್ತಿದ್ದಂತೆ ಚನ್ನಮ್ಮನ ಕಿತ್ತೂರು ಠಾಣೆಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.
ಎಲ್ಲ ಸಮುದಾಯದ ಜನ ಸೇರಿಕೊಂಡು ಶಾಂತಿಯುತವಾಗಿ ಚರ್ಚೆ ನಡೆಸಿದ್ದು, ಕಿಡಿಗೇಡಿಗಳನ್ನು ಪತ್ತೆ ಹಚ್ವಿ, ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು. ಪರಿಸ್ಥಿತಿ ಶಾಂತಿಯುತವಾಗಿದೆ.
ಎಂ.ಕೆ.ಹುಬ್ಬಳ್ಳಿಯ ದಲಿತ ಸಂಘರ್ಷ ಸಮಿತಿ ಯುವಕರು ಈ ಭಾವಚಿತ್ರ ಅಳವಡಿಸಿದ್ದರು. ಸದ್ಯ ಅದನ್ನು ತೆರವು ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.