ADVERTISEMENT

ಬೆಳಗಾವಿ | ಮೀನು ಹಿಡಿಯಲು ಹೋಗಿದ್ದ ತಂದೆ, ಇಬ್ಬರು ಮಕ್ಕಳು ನೀರುಪಾಲು

​ಪ್ರಜಾವಾಣಿ ವಾರ್ತೆ
Published 18 ನವೆಂಬರ್ 2024, 6:53 IST
Last Updated 18 ನವೆಂಬರ್ 2024, 6:53 IST
<div class="paragraphs"><p>ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.</p></div>

ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.

   

ಯಮಕನಮರಡಿ: ಸಮೀಪದ ಬೆನಕನಹೊಳಿ ಬಳಿ ಘಟಪ್ರಭಾ ನದಿ ಹಿನ್ನೀರಿನ ಪ್ರದೇಶದಲ್ಲಿ ಮೀನು ಹಿಡಿಯಲು ಹೋಗಿದ್ದ ತಂದೆ ಮತ್ತು ಇಬ್ಬರು ಮಕ್ಕಳು ನೀರುಪಾಲಾಗಿದ್ದು, ಸೋಮವಾರ ಬೆಳಿಗ್ಗೆಯಿಂದ ಅವರ ಮೃತದೇಹದ ಹುಡುಕಾಟ ನಡೆದಿದೆ.

ಬೆನಕನಹೊಳಿಯ ಲಕ್ಷ್ಮಣ ರಾಮ ಅಂಬಲಿ(45), ಅವರ ಮಕ್ಕಳಾದ ರಮೇಶ(15), ಯಲ್ಲಪ್ಪ(13) ನೀರುಪಾಲಾದವರು.

ADVERTISEMENT

ಲಕ್ಷ್ಮಣ ಹಾಗೂ ಅವರ ಮಕ್ಕಳು ಘಟಪ್ರಭಾ ನದಿ ಸೇತುವೆ ಮೇಲೆ ಭಾನುವಾರ ಸಂಜೆ ಬೈಕ್ ನಿಲ್ಲಿಸಿ, ಮೀನು ಹಿಡಿಯಲು ನದಿ‌ ನೀರಿಗೆ ಇಳಿದಿದ್ದರು. ಆದರೆ, ಸೋಮವಾರ ಬೆಳಿಗ್ಗೆಯವರೆಗೂ ಮನೆಗೆ ಬಾರದಿದ್ದಾಗ ಆತಂಕಗೊಂಡ ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈಗ ಎನ್.ಡಿ.ಆರ್.ಎಫ್ ತಂಡದವರು ಹಾಗೂ ಯಮಕನಮರಡಿ ಠಾಣೆ ಪೊಲೀಸರು ನೀರುಪಾಲಾಗಿರುವ ಮೂವರ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.