ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲ್ಲೂಕಿನ ಹುಣಶ್ಯಾಳ ಪಿ.ವೈ ಗ್ರಾಮ ನಡುಗಡೆಯಾಗಿದ್ದು, ಗ್ರಾಮಸ್ಥರೊಬ್ಬರು ಅಡುಗೆ ಅನಿಲ ಸಿಲಿಂಡರ್ ಹೊತ್ತು ಸುರಕ್ಷಿತ ಸ್ಥಳಕ್ಕೆ ತೆರಳುತ್ತಿರುವುದು
–ಪ್ರಜಾವಾಣಿ ಚಿತ್ರ: ಬಾಲಶೇಖರ ಬಂದಿ
ಬೆಳಗಾವಿ: ವ್ಯಾಪಕ ಮಳೆ ಹಾಗೂ ಪ್ರವಾಹದ ಹಿನ್ನೆಲೆಯಲ್ಲಿ ಹಿನ್ನೆಲೆಯಲ್ಲಿ ಗೋಕಾಕ, ಮೂಡಲಗಿ ತಾಲ್ಲೂಕಿನ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಜುಲೈ 29, 30ರಂದು ರಜೆ ಘೋಷಿಸಲಾಗಿದೆ.
ನೆರೆ ಸಂತ್ರಸ್ತರಿಗಾಗಿ ತೆರೆದ ಕಾಳಜಿ ಕೇಂದ್ರಗಳಿರುವ ಮತ್ತು ರಸ್ತೆ ಸಂಪರ್ಕ ಕಡಿತಗೊಂಡ ನಿಪ್ಪಾಣಿ, ಹುಕ್ಕೇರಿ, ಕಾಗವಾಡ ಮತ್ತು ಚಿಕ್ಕೋಡಿ ತಾಲ್ಲೂಕುಗಳ ಆಯ್ದ ಶಾಲೆಗಳಿಗೂ ಎರಡು ದಿನ ರಜೆ ಇರುತ್ತದೆ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.