ಬೆಳಗಾವಿ: ಇಲ್ಲಿನ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಪ್ರತಿಷ್ಠಾನದಿಂದ ನೀಡಲಾಗುವ 2020–21ನೇ ಸಾಲಿನ ವಿವಿಧ ಪ್ರಶಸ್ತಿಗಳಿಗೆ ಡಾ.ಸಿದ್ದಲಿಂಗ ಪಟ್ಟಣಶೆಟ್ಟಿ (ಕಾವ್ಯ), ಕುಂ. ವೀರಭದ್ರಪ್ಪ (ಕಥೆ) ಮತ್ತು ವೈದೇಹಿ (ಕಾದಂಬರಿ) ಅವರನ್ನು ಆಯ್ಕೆ ಮಾಡಲಾಗಿದೆ.
ಈ ಪ್ರಶಸ್ತಿಗಳು ತಲಾ ₹ 50ಸಾವಿರ ಒಳಗೊಂಡಿವೆ. ಧಾರವಾಡದ ಆಲೂರು ವೆಂಕಟರಾವ್ ರಾಷ್ಟ್ರೀಯ ಸ್ಮಾರಕ ಭವನದಲ್ಲಿ ಸೆ.5ರಂದು ನಡೆಯುವ ಕಾರ್ಯಕ್ರಮದಲ್ಲಿ ಸಂಸ್ಕೃತಿ ಚಿಂತಕ ಡಾ.ಗುರುಲಿಂಗ ಕಾಪಸೆ ಪ್ರದಾನ ಮಾಡಲಿದ್ದಾರೆ ಎಂದು ಪ್ರತಿಷ್ಠಾನದ ಅಧ್ಯಕ್ಷ ಪ್ರೊ.ರಾಘವೇಂದ್ರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.