ADVERTISEMENT

ನಿಪ್ಪಾಣಿ ನಗರ ಪ್ರವೇಶಿಸಿದ ಭೀಮಯಾತ್ರೆ

​ಪ್ರಜಾವಾಣಿ ವಾರ್ತೆ
Published 15 ಏಪ್ರಿಲ್ 2025, 12:30 IST
Last Updated 15 ಏಪ್ರಿಲ್ 2025, 12:30 IST
   

ನಿಪ್ಪಾಣಿ(ಬೆಳಗಾವಿ ಜಿಲ್ಲೆ): ಬಿ.ಆರ್.ಅಂಬೇಡ್ಕರ್ ನಗರಕ್ಕೆ ಭೇಟಿ ನೀಡಿದ ಕ್ಷಣಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಸಂಚರಿಸುತ್ತಿರುವ ಭೀಮಯಾತ್ರೆ ಮಂಗಳವಾರ ಸಂಜೆ ನಿಪ್ಪಾಣಿ ಪ್ರವೇಶಿಸಿತು.

ಸ್ತವನಿಧಿ ಘಟ್ಟದ ಮೂಲಕ ನಗರಕ್ಕೆ ಆಗಮಿಸಿದ ಯಾತ್ರೆ ಪ್ರಮುಖ ಬೀದಿಗಳಲ್ಲಿ ಸಂಚರಿಸಿ, ಮುನ್ಸಿಪಲ್ ಪ್ರೌಢಶಾಲೆ ಮೈದಾನ ತಲುಪಿತು.

ಬಿಜೆಪಿ ನಾಯಕರು, ಕಾರ್ಯಕರ್ತರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಉತ್ಸಾಹದಿಂದ ಪಾಲ್ಗೊಂಡರು. ಮೆರವಣಿಗೆಯುದ್ದಕ್ಕೂ ಅಂಬೇಡ್ಕರ್ ಭಾವಚಿತ್ರವಿರುವ ಬಾವುಟಗಳ ರಾರಾಜಿಸಿದವು.

ADVERTISEMENT

ಈಗ ಮುನ್ಸಿಪಲ್ ಪ್ರೌಢಶಾಲೆ ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಕೇಂದ್ರ ಸಚಿವ ಚಿರಾಗ ಪಾಸ್ವಾನ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ, ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಗೋವಿಂದ ಕಾರಜೋಳ, ಶಾಸಕರಾದ ಶಶಿಕಲಾ ಜೊಲ್ಲೆ, ನಿಖಿಲ್ ಕತ್ತಿ, ದುರ್ಯೋಧನ ಐಹೊಳೆ ಮತ್ತಿತರರು ಪಾಲ್ಗೊಳ್ಳುವರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.