ADVERTISEMENT

ಅಪಘಾತ: ಬೈಕ್ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 28 ಸೆಪ್ಟೆಂಬರ್ 2022, 8:38 IST
Last Updated 28 ಸೆಪ್ಟೆಂಬರ್ 2022, 8:38 IST
   

ನಿಪ್ಪಾಣಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಬೋರಗಾಂವ ಗ್ರಾಮದ ಹೊರವಲಯದಲ್ಲಿ ಬುಧವಾರ ಬೈಕ್‌ ಹಾಗೂ ಮ್ಯಾಕ್ಸಿಕ್ಯಾಬ್‌ ಮಧ್ಯೆ ಡಿಕ್ಕಿ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ರಾಮ ಕೃಷ್ಣ ಸನದಿ (32) ಮೃತಪಟ್ಟವರು. ರಾಮ ಅವರು ಇಚಲಕರಂಜಿಯಿಂದ ಬೋರಗಾಂವ ಗ್ರಾಮಕ್ಕೆ ಬೈಕಿನ ಮೇಲೆ ಬರುತ್ತಿದ್ದರು. ಎದುರಿನಿಂದ ಬಂದ ಮ್ಯಾಕ್ಸಿಕ್ಯಾಬ್‌ ವಾಹನ ಬೈಕಿಗೆ ಡಿಕ್ಕಿ ಹೊಡೆಯಿತು. ತೀವ್ರ ರಕ್ತಸ್ರಾವದಿಂದ ರಾಮ ಅವರು ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಡಿವೈಎಸ್‌ಪಿ ಬಸವರಾಜ ಯಲಿಗಾರ, ಸದಲಗಾ ಪಿಎಸ್‌ಐ ಎಚ್‌.ಭರತಗೌಡ ಸ್ಥಳ ಪರಿಶೀಲನೆ ನಡೆಸಿದರು. ಸದಲಗಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.