ADVERTISEMENT

ಬೆಳಗಾವಿ: ಬೈಕ್‌ ಸವಾರ ಸಾವು

​ಪ್ರಜಾವಾಣಿ ವಾರ್ತೆ
Published 1 ಜನವರಿ 2024, 15:40 IST
Last Updated 1 ಜನವರಿ 2024, 15:40 IST

ಬೆಳಗಾವಿ: ಇಲ್ಲಿನ ಕಾಲೇಜು ರಸ್ತೆಯ ಸರ್ಕಾರಿ ಸರ್ದಾರ್ಸ್‌ ಪ್ರೌಢಶಾಲೆ ಮೈದಾನದ ಬಳಿ ಡಿವೈಡರ್‌ಗೆ ಬೈಕ್‌ ಡಿಕ್ಕಿ ಹೊಡೆದು, ಸವಾರನೊಬ್ಬ ಮೃತಪಟ್ಟ ಘಟನೆ ಸೋಮವಾರ ನಸುಕಿನ ಜಾವ ನಡೆದಿದೆ.

ತಾಲ್ಲೂಕಿನ ಮಚ್ಛೆಯ ಪಂಕಜ್‌ ರಾಮಚಂದ್ರ ಜಗತಾಪ(28) ಮೃತರು. ಮತ್ತೊಬ್ಬ ಸವಾರ ಮಚ್ಛೆಯ ಅಜಯ್‌ ಕೃಷ್ಣಾ ಚೌಗುಲೆ(31) ಗಾಯಗೊಂಡಿದ್ದು, ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. 

‘ಇಬ್ಬರೂ ಸವಾರರು ರಾಣಿ ಚನ್ನಮ್ಮನ ವೃತ್ತದಿಂದ ತಮ್ಮೂರಿಗೆ ಹೊರಟಿದ್ದರು’ ಎಂದು ಪೊಲೀಸರು ತಿಳಿಸಿದ್ದಾರೆ. ಸಂಚಾರ ದಕ್ಷಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.