
ಪ್ರಜಾವಾಣಿ ವಾರ್ತೆ
ಸಾವು (ಪ್ರಾತಿನಿಧಿಕ ಚಿತ್ರ)
ಘಟಪ್ರಭಾ (ಗೋಕಾಕ): ತಾಲ್ಲೂಕಿನ ಲೋಳಸೂರ ಗ್ರಾಮದ ಹತ್ತಿರ ಮಂಗಳವಾರ ಕಬ್ಬು ತುಂಬಿಕೊಂಡು ಸಾಗುತ್ತಿದ್ದ ಟ್ರ್ಯಾಕ್ಟರ್ ಹಿಂದಿಕ್ಕುವ ಭರದಲ್ಲಿ ದ್ವಿಚಕ್ರ ವಾಹನ ಸವಾರ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರ್ಯಾಲಿ ಚಕ್ರದಡಿ ಉರುಳಿಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಮೂಡಲಗಿಯ ಬಸು ಲಕ್ಷ್ಮಣ ಗೌಲೆತ್ತಿನವರ (24) ಅವರನ್ನು ಗೋಕಾಕ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ಬುಧವಾರ ಮೃತಪಟ್ಟಿದ್ದಾರೆ
ಘಟನೆ ಬಳಿಕ ಟ್ರ್ಯಾಕ್ಟರ್ ಚಾಲಕ ಪರಾರಿಯಾಗಿದ್ದಾನೆ. ಘಟಪ್ರಭಾ ಪೊಲೀಸರು ಉಭಯ ಸವಾರರ ಮೇಲೆ ಅಜಾಗರೂಕತೆ ಚಾಲನೆಯ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.