ಬೆಳಗಾವಿ: ‘ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಕಲಾ ಮತ್ತು ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳು ಧೃತಿಗೆಡದೆ, ಆತ್ಮವಿಶ್ವಾಸದಿಂದ ಮುನ್ನಡೆಯಬೇಕು. ನಿಶ್ಚಿತ ಗುರಿ, ದೃಢಸಂಕಲ್ಪ ಹಾಗೂ ಸತತ ಪ್ರಯತ್ನವಿದ್ದರೆ ಜಗತ್ತನ್ನೇ ಗೆಲ್ಲಬಹುದು’ ಎಂದು ಸಹಕಾರ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕ ಸುರೇಶಗೌಡ ಪಾಟೀಲ ಹೇಳಿದರು.
ಇಲ್ಲಿನ ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಪ್ರಭುದೇವ ಸಭಾಗೃಹದಲ್ಲಿ ಆಯೋಜಿಸಿದ್ದ ಸಿದ್ಧರಾಮೇಶ್ವರ ಪದವಿಪೂರ್ವ ಮಹಾವಿದ್ಯಾಲಯದ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾನ್ನಿಧ್ಯ ವಹಿಸಿದ್ದ ನಾಗನೂರು ರುದ್ರಾಕ್ಷಿಮಠದ ಅಲ್ಲಮಪ್ರಭು ಸ್ವಾಮೀಜಿ, ‘ಇಂದು ವಿದ್ಯಾರ್ಥಿಗಳು ಆಟದ ಮೈದಾನಗಳ ಬದಲಿಗೆ, ಗ್ರಂಥಾಲಯದಲ್ಲಿ ಹೆಚ್ಚಿನ ಸಮಯ ಕಳೆಯಬೇಕು. ಸಾಮಾಜಿಕ ಜಾಲತಾಣ ತ್ಯಜಿಸಿ, ನಿರಂತರವಾಗಿ ಅಧ್ಯಯನದಲ್ಲಿ ತೊಡಗಿದರೆ ಮಾತ್ರ ಯಶಸ್ಸು ಗಳಿಸಲು ಸಾಧ್ಯ’ ಎಂದರು.
ಸಿದ್ಧರಾಮೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಕೆ.ಬಿ.ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ಪದವಿಪೂರ್ವ ಶಿಕ್ಷಣ ಇಲಾಖೆ ಬೆಳಗಾವಿ ಉಪನಿರ್ದೇಶಕ ಎಂ.ಎಂ.ಕಾಂಬಳೆ, ಪದವಿಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಸಿದ್ದರಾಮ ರೆಡ್ಡಿ, ಪಿ.ಡಿ.ಶಿವನಾಯ್ಕರ, ಪೂಜಾ ರಾಜಗುಳಿ, ಮನೋಹರ ಪಮ್ಮಾರ ಉಪಸ್ಥಿತರಿದ್ದರು. ಎ.ಕೆ.ಪಾಟೀಲ ಸ್ವಾಗತಿಸಿದರು. ಶಶಿಕಲಾ ಪಾಟೀಲ ಹಾಗು ಸುಮಲತಾ ಹಿರೇಮಠ ನಿರೂಪಿಸಿದರು. ಪರಮೇಶ ದೊಡಮನಿ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.