ಬೆಳಗಾವಿ: ಶೀಘ್ರವೇ ಎದುರಾಗಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಅಧಿಕೃತವಾಗಿ ಸಿದ್ಧತೆ ಆರಂಭಿಸಿರುವ ಬಿಜೆಪಿಯು, ರಣತಂತ್ರ ರೂಪಿಸುವುದಕ್ಕಾಗಿ ‘ಸಪ್ತ ಉಸ್ತುವಾರಿ’ಗಳನ್ನು ನೇಮಿಸಿದೆ.
ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಸಚಿವರಾದ ಜಗದೀಶ ಶೆಟ್ಟರ್, ರಮೇಶ ಜಾರಕಿಹೊಳಿ, ಉಮೇಶ ಕತ್ತಿ, ಶಶಿಕಲಾ ಜೊಲ್ಲೆ, ಪಕ್ಷದ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ ಮತ್ತು ವಿಭಾಗದ ಸಹ ಪ್ರಭಾರಿ ಬಸವರಾಜ ಯಂಕಂಚಿ ಅವರನ್ನು ನೇಮಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.