ADVERTISEMENT

ಕುಮಾರಸ್ವಾಮಿ ರಾಜೀನಾಮೆಗೆ ಬಿಜೆಪಿ ಒತ್ತಾಯ

​ಪ್ರಜಾವಾಣಿ ವಾರ್ತೆ
Published 9 ಜುಲೈ 2019, 10:32 IST
Last Updated 9 ಜುಲೈ 2019, 10:32 IST
ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು
ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ರಾಜೀನಾಮೆ ನೀಡುವಂತೆ ಆಗ್ರಹಿಸಿ ಬೆಳಗಾವಿಯಲ್ಲಿ ಬಿಜೆಪಿ ಕಾರ್ಯಕರ್ತರು ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ‘ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರ ಅಲ್ಪಮತಕ್ಕೆ ಕುಸಿದಿರುವುದರಿಂದ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಮ್ಮ ಸ್ಥಾನಕ್ಕೆ ರಾಜೀನಾಮೆ‌ ನೀಡಿ, ಅಧಿಕಾರದಿಂದ ಕೆಳಗಿಳಿಯಬೇಕು’ ಎಂದು ಒತ್ತಾಯಿಸಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಬಳಿ ಮಂಗಳವಾರ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಮೆರವಣಿಗೆ ನಡೆಸಿದ ಅವರು,‌ ‘12 ಶಾಸಕರು ರಾಜೀನಾಮೆ ನೀಡಿರುವುದರಿಂದ ಸರ್ಕಾರಕ್ಕೆ ಬಹುಮತ ಇಲ್ಲವಾಗಿದೆ. ಹೀಗಾಗಿ, ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳನ್ನು ಗಮನಿಸಿ ರಾಜ್ಯಪಾಲರು ಮಧ್ಯಪ್ರವೇಶಿಸಬೇಕು’ ಎಂದು ಆಗ್ರಹಿಸಿದರು.

ನಗರ ಘಟಕದ ಅಧ್ಯಕ್ಷ ರಾಜೇಂದ್ರ ಹರಕುಣಿ, ಜಿಲ್ಲಾ ಘಟಕದ ಅಧ್ಯಕ್ಷ ಡಾ.ವಿ.ಐ. ಪಾಟೀಲ, ಮುಖಂಡರಾದ ರಾಜು ಚಿಕ್ಕನಗೌಡರ, ಶ್ರೀನಿವಾಸ ಬೀಸನಕೊಪ್ಪ,‌ ಧನಂಜಯ ಜಾಧವ, ಶ್ರೀನಿವಾಸ ಪಾಟೀಲ, ಲೀನಾ ಟೋಪಣ್ಣವರ ಭಾಗವಹಿಸಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.