ADVERTISEMENT

ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಬಿಜೆಪಿ ಮುಖಂಡ ಪೂಜಾರಿ!

​ಪ್ರಜಾವಾಣಿ ವಾರ್ತೆ
Published 19 ಸೆಪ್ಟೆಂಬರ್ 2019, 14:20 IST
Last Updated 19 ಸೆಪ್ಟೆಂಬರ್ 2019, 14:20 IST
ಗೋಕಾಕದ ಬಿಜೆಪಿ ಮುಖಂಡ ಅಶೋಕ ಪೂಜಾರಿ ನೇತೃತ್ವದ ನಿಯೋಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು  ಬೆಂಗಳೂರಿನಲ್ಲಿ ಭೇಟಿಯಾಗಿ ಗೋಕಾಕ–ಮಿಲ್ಸ್‌ಗೆ ಗುತ್ತಿಗೆ ಆಧಾರದ ಮೇಲೆ ನೀಡಿರುವ 312 ಎಕರೆ ಜಮೀನು ಹಿಂಪಡೆದು ಅಲ್ಲಿ ನಿವೇಶನ ಅಭಿವೃದ್ಧಿಪಡಿಸಿ ನಿರಾಶ್ರಿತರಿಗೆ ಹಂಚುವಂತೆ ಆಗ್ರಹಿಸಿ ಮನವಿ ಸಲ್ಲಿಸಿತು

ಗೋಕಾಕ: ಬಿಜೆಪಿ ಮುಖಂಡ ಮತ್ತು ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದ ಅಶೋಕ ಪೂಜಾರಿ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಬೆಂಗಳೂರಿನಲ್ಲಿ ಭೇಟಿಯಾಗಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

ಇಲ್ಲಿನ ಅನರ್ಹ ಶಾಸಕ ರಮೇಶ ಜಾರಕಿಹೊಳಿ ಅವರ ವಿರುದ್ಧ ಹೋರಾಟ ನಡೆಸುತ್ತಿರುವ ಪೂಜಾರಿ, ಕಾಂಗ್ರೆಸ್‌ ನಾಯಕನನ್ನು ಭೇಟಿ ಮಾಡಿರುವುದು ಅಚ್ಚರಿ ಮೂಡಿಸಿದೆ. ಆದರೆ, ‘ಸಿದ್ದರಾಮಯ್ಯ ಅವರೊಂದಿಗೆ ನಾನು ರಾಜಕೀಯ ಚರ್ಚೆ ನಡೆಸಿಲ್ಲ’ ಎಂದು ಸ್ಪಷ್ಟಪಡಿಸಿದ್ದಾರೆ.

‘ನೆರೆಯಿಂದ ಮನೆ, ಆಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ಶಾಶ್ವತ ಪುನರ್ವಸತಿ ಕಲ್ಪಿಸಬೇಕು. ನಿವೇಶನರಹಿತ ಬಡ ಕುಟುಂಬಗಳಿಗೆ ಸರ್ಕಾರಿ ಒಡೆತನದ ಖಾಲಿ ಜಾಗದಲ್ಲಿ ನಿವೇಶನ ಅಭಿವೃದ್ಧಿಪಡಿಸಿ ಹಂಚಬೇಕು ಎಂದು ಒತ್ತಾಯಿಸಿದ್ದೇವೆ’ ಎಂದು ಮಾಹಿತಿ ನೀಡಿದರು.

ADVERTISEMENT

‘ಗೋಕಾಕ ನಾಗರಿಕರ ಪರವಾಗಿ ಮನವಿ ಸಲ್ಲಿಸಿದ್ದೇನೆ. ನಿಯೋಗದ ಮನವಿಗೆ ಸ್ಪಂದಿಸಿದ ಅವರು ಸರ್ಕಾರಕ್ಕೆ ಪತ್ರ ಬರೆಯುವುದಾಗಿಯೂ ಭರವಸೆ ನೀಡಿದ್ದಾರೆ’ ಎಂದು ತಿಳಿಸಿದರು.

ಮುಖಂಡರಾದ ಶಾಮಾನಂದ ಪೂಜಾರಿ, ರಾಮಣ್ಣ ದೇಮನ್ನವರ, ಲಕ್ಷ್ಮಣ ಕರಮುಶಿ, ಲೋಕನಾಥ್ ತೋಡಕರ, ಸಂಜಯ್ ಪೂಜಾರಿ, ಮಲ್ಲಿಕಾರ್ಜುನ ಪೂಜಾರಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.