ADVERTISEMENT

ಬೆಳಗಾವಿ: ಮಂಗಲಾ ಮೆಟಗುಡ್ಡಗೆ ಬಿಜೆಪಿ ನಾಯಕ ಪ್ರಭಾಕರ ಕೋರೆ ಬೆಂಬಲ

​ಪ್ರಜಾವಾಣಿ ವಾರ್ತೆ
Published 9 ನವೆಂಬರ್ 2021, 15:37 IST
Last Updated 9 ನವೆಂಬರ್ 2021, 15:37 IST
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿರುವ ಮಂಗಲಾ ಮೆಟಗುಡ್ಡ ಅವರು ತಯಾರಿಸುವ ಪ್ರಣಾಳಿಕೆಯನ್ನು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಬೆಳಗಾವಿಯಲ್ಲಿ ಸೋಮವಾರ ಬಿಡುಗಡೆ ಮಾಡಿದರು. ಸಾಹಿತಿಗಳು ಇದ್ದಾರೆ
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದ ಚುನಾವಣೆಗೆ ಸ್ಪರ್ಧಿಸಿರುವ ಮಂಗಲಾ ಮೆಟಗುಡ್ಡ ಅವರು ತಯಾರಿಸುವ ಪ್ರಣಾಳಿಕೆಯನ್ನು ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಬೆಳಗಾವಿಯಲ್ಲಿ ಸೋಮವಾರ ಬಿಡುಗಡೆ ಮಾಡಿದರು. ಸಾಹಿತಿಗಳು ಇದ್ದಾರೆ   

ಬೆಳಗಾವಿ: ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನಕ್ಕೆ ಮರು ಆಯ್ಕೆ ಬಯಸಿರುವ ಮಂಗಲಾ ಮೆಟಗುಡ್ಡ ಅವರಿಗೆ ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ, ಬಿಜೆಪಿ ನಾಯಕ ಪ್ರಭಾಕರ ಕೋರೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ನ.21ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಂಗಲಾ ಸಿದ್ಧಪಡಿಸಿರುವ ಪ್ರಣಾಳಿಕೆಯನ್ನು ಇಲ್ಲಿನ ನೆಹರೂ ನಗರದ ಕನ್ನಡ ಭವನದಲ್ಲಿ ಬಿಡುಗಡೆ ಮಾಡುವ ಮೂಲಕ ಬೆಂಬಲ ಘೋಷಿಸಿದರು.

ಈ ಸಂದರ್ಭದಲ್ಲಿ ಸಾಹಿತಿಗಳಾದ ಬಿ.ಎಸ್. ಗವಿಮಠ, ಬಸವರಾಜ ಜಗಜಂಪಿ, ಯ.ರು. ಪಾಟೀಲ, ಗುರುದೇವಿ ಹುಲೆಪ್ಪನವರಮಠ, ಮಹೇಶ ಗುರನಗೌಡರ, ಕನ್ನಡ ಹೋರಾಟಗಾರ ಶಿವನಗೌಡ ಪಾಟೀಲ ಮೊದಲಾದವರು ಉಪಸ್ಥಿತರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.