ADVERTISEMENT

ಹುಕ್ಕೇರಿ: ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಚಾಲನೆ

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2024, 13:13 IST
Last Updated 23 ಸೆಪ್ಟೆಂಬರ್ 2024, 13:13 IST
ಹುಕ್ಕೇರಿ ತಾಲ್ಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಚಾಲನೆ ನೀಡಿದರು
ಹುಕ್ಕೇರಿ ತಾಲ್ಲೂಕಿನ ಯಮಕನಮರಡಿ ಮತಕ್ಷೇತ್ರದ ವ್ಯಾಪ್ತಿಯ ಆಯೋಜಿಸಿದ್ದ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಎಸ್.ಟಿ.ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಚಾಲನೆ ನೀಡಿದರು   

ಹುಕ್ಕೇರಿ: ಯಮಕನಮರಡಿ ಮತಕ್ಷೇತ್ರದ ಪಾಶ್ಚಾಪುರ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಶಿರೂರ ಗ್ರಾಮದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಬಿಜೆಪಿ ಎಸ್.ಟಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಬಸವರಾಜ ಹುಂದ್ರಿ ಚಾಲನೆ ನೀಡಿದರು.

ನಂತರ ಮಾತನಾಡಿದ ಅವರು, ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷವಾದ ಬಿಜೆಪಿ ಸದಸ್ಯತ್ವ ಅಭಿಯಾನ ದೇಶದಾದ್ಯಂತ ಯಶಸ್ವಿಯಾಗಿ ನಡೆಯುತ್ತಿದ್ದು, ದೇಶದ ಪ್ರತಿಯೊಬ್ಬ ನಾಗರಿಕರೂ ಬಿಜೆಪಿಯ ಸದಸ್ಯರಾಗಿ ದೆಶದ ಅಭಿವೃದ್ಧಿಗೆ ಕೈಜೋಡಿಸಬೇಕು. ದೇಶದ ಹಿತಕ್ಕೆ ಯಾವ ಪಕ್ಷ ಸೂಕ್ತ ಎಂಬುದನ್ನು ಅರಿತು, ಜನರು ಸ್ವಯಂ ಪ್ರೇರಣೆಯಿಂದ ಸದಸ್ಯತ್ವ ಹೊಂದಲು ಸಲಹೆ ನೀಡಿದರು.

ಯಮಕನಮರಡಿ ಉತ್ತರ ಹಾಗೂ ದಕ್ಷಿಣ ಎರಡೂ ಮಂಡಲಗಳ ಅಧ್ಯಕ್ಷರಾದ ಶ್ರೀಶೈಲ ಯಮಕನಮರಡಿ, ಅಪ್ಪಯ್ಯ ಜಾಜರಿ, ರೈತ ಮೋರ್ಚಾ ಮಂಡಲ ಅಧ್ಯಕ್ಷ ಸಿದ್ದಲಿಂಗ ಸಿದ್ದಗೌಡರ, ಪಕ್ಷದ ಹಿರಿಯ ಮಾರ್ಗದರ್ಶಕ ಬಿ.ಎಚ್. ಇನಾಮ್ದಾರ್ ಮತ್ತು ಮುಖಂಡರಾದ ಶೇಖರಗೌಡ ಮೋದಗಿ, ರಾಜನ್ ಮಠಪತಿ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.