ADVERTISEMENT

ಯಡಿಯೂರಪ್ಪ, ಡಿಕೆಶಿ, ಎಚ್‌ಡಿಕೆ, ಸಿದ್ದರಾಮಯ್ಯ ದಿನ ರಾತ್ರಿ ಮಾತಾಡ್ತಾರೆ: ಯತ್ನಾಳ

​ಪ್ರಜಾವಾಣಿ ವಾರ್ತೆ
Published 5 ಮೇ 2022, 14:54 IST
Last Updated 5 ಮೇ 2022, 14:54 IST
ಯತ್ನಾಳ
ಯತ್ನಾಳ   

ಬೆಳಗಾವಿ: ‘ಗೋಕಾಕ ಶಾಸಕ ರಮೇಶ ಜಾರಕಿಹೊಳಿ ವಿರುದ್ಧ ಷಡ್ಯಂತ್ರ ಹಾಗೂ ಮೋಸ ಮಾಡಿದವರಲ್ಲಿ ನಮ್ಮಲ್ಲಿನ (ಬಿಜೆಪಿ) ಮಹಾನ್‌ ನಾಯಕರೊಬ್ಬರ ಪುತ್ರನ ಪಾತ್ರವಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ಜಿಲ್ಲೆಯ ಗೋಕಾಕದಲ್ಲಿ ಪತ್ರಕರ್ತರೊಂದಿಗೆ ಗುರುವಾರ ಮಾತನಾಡಿದ ಅವರು, ‘ಬಿಜೆಪಿ ಸರ್ಕಾರ ರಚನೆಯಲ್ಲಿ ಮಹತ್ವದ ಕೊಡುಗೆ ನೀಡಿರುವ ರಮೇಶ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ಕೊಡಬೇಕು’ ಎಂದರು.

‘ಬಿಜೆಪಿಯಲ್ಲಿರುವ ಮಹಾನ್‌ ನಾಯಕ ಬಿ.ಎಸ್.ಯಡಿಯೂರಪ್ಪ, ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಮೊದಲಾದವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಎಲ್ಲರೂ ನಿತ್ಯ ರಾತ್ರಿ ಮಾತನಾಡುತ್ತಾರೆ’ ಎಂದು ಆರೋಪಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.