
ಬೆಳಗಾವಿ: ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ‘ಗೃಹಲಕ್ಷ್ಮಿ’ ಯೋಜನೆ ಹಣ ದುರುಪಯೋಗ ಮಾಡಿಕೊಂಡ ಲಕ್ಷ್ಮಿ ಹೆಬ್ಬಾಳಕರ ಅವರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಬಿಜೆಪಿ ಕಾರ್ಯಕರ್ತರು ಇಲ್ಲಿನ ರಾಣಿ ಚನ್ನಮ್ಮನ ವೃತ್ತದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
‘ಗೃಹಲಕ್ಷ್ಮಿ ಯೋಜನೆಯ ₹5 ಸಾವಿರ ಕೋಟಿ ಕುರಿತು ಸದನದಲ್ಲಿ ತಪ್ಪು ಮಾಹಿತಿ ನೀಡಿ, ಮಹಿಳೆಯರಿಗೆ ವಂಚಿಸುವ ಕೆಲಸವನ್ನು ಹೆಬ್ಬಾಳಕರ ಮಾಡಿದ್ದಾರೆ. ಈಗ ತಪ್ಪನ್ನು ಅಧಿಕಾರಿಗಳ ಮೇಲೆ ಹಾಕಲು ಪ್ರಯತ್ನ ನಡೆಸಿದ್ದಾರೆ. ಹಾಗಾಗಿ ನೈತಿಕ ಹೊಣೆ ಹೊತ್ತು ಸಚಿವೆ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು’ ಎಂದು ಆಗ್ರಹಿಸಿದರು.
‘ಗೃಹಲಕ್ಷ್ಮಿ ಯೋಜನೆ ಹಣದ ಕುರಿತು ಹೆಬ್ಬಾಳಕರ ಸರಿಯಾಗಿ ಲೆಕ್ಕಪತ್ರ ನೀಡಬೇಕು. ಇದರ ಬದಲಿಗೆ ಅಸಂಬದ್ಧ ಹೇಳಿಕೆ ನೀಡಿ ಜಾರಿಕೊಳ್ಳಬಾರದು’ ಎಂದು ಒತ್ತಾಯಿಸಿದರು.
ಮುಖಂಡರಾದ ಗೀತಾ ಸುತಾರ, ದೀಪಾ ಕುಡಚಿ, ಮಹಾಂತೇಶ ವಕ್ಕುಂದ ಇತರರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.