ರಾಮದುರ್ಗ: ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರೋಧಿಸಿ ಶನಿವಾರ ರಾಮದುರ್ಗ ಬಿಜೆಪಿ ಪಟ್ಟಣದಲ್ಲಿ ಪ್ರತಿಭಟನೆ ಮಾಡಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.
ಎಸ್‍ಸಿ ಮತ್ತು ಎಸ್‍ಟಿ ಮೀಸಲು ಅನುದಾನ ದುರ್ಬಳಕೆ ಮಾಡಿರುವುದನ್ನು ಖಂಡಿಸಿ ವಿಧಾನಸಭೆಯಲ್ಲಿ ಪ್ರತಿಭಟನೆ ಮಾಡಿರುವ 18 ಬಿಜೆಪಿ ಶಾಸಕರ ಅಮಾನತು ಮಾಡಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆಯಲ್ಲಿ ರಾಮದುರ್ಗ ಬಿಜೆಪಿ ಮಂಡಳದ ಅಧ್ಯಕ್ಷ ಡಾ. ಕೆ.ವಿ.ಪಾಟೀಲ, ಪ್ರಧಾನ ಕಾರ್ಯದರ್ಶಿ ಈರನಗೌಡ ಹೊಸಗೌಡ್ರ, ಕೃಷ್ಣಾ ರಾಠೋಡ, ಮಲ್ಲಿಕಾರ್ಜುನ ಭಾವಕಟ್ಟಿ, ಸಿ.ಎಸ್. ಹಿರೇಮಠ, ಆರ್. ಎನ್. ಕಲ್ಲೂರ, ಮಾರುತಿ ಮೆಟ್ಟಿನ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.