ಗೋಕಾಕ (ಬೆಳಗಾವಿ ಜಿಲ್ಲೆ): ಶಾಸಕ ರಮೇಶ ಜಾರಕಿಹೊಳಿ ಆಹ್ವಾನದ ಮೇರೆಗೆ ಸೋಮವಾರ ನಗರಕ್ಕೆ ಭೇಟಿ ನೀಡಿದ ಬಿಜೆಪಿಯ ಸಮಾನ ಮನಸ್ಕ ಶಾಸಕರು ಮತ್ತು ಮಾಜಿ ಸಚಿವರು, ಗ್ರಾಮದೇವತೆ ಜಾತ್ರೆಯಲ್ಲಿ ಪಾಲ್ಗೊಂಡರು.
ಮಾಜಿ ಸಚಿವರಾದ ಅರವಿಂದ ಲಿಂಬಾವಳಿ, ಕುಮಾರ ಬಂಗಾರಪ್ಪ, ಶ್ರೀಮಂತ ಪಾಟೀಲ, ಮಾಜಿ ಸಂಸದ ಬಿ.ವಿ.ನಾಯಕ, ಶಾಸಕ ಬಿ.ಪಿ.ಹರೀಶ, ಮಾಜಿ ಶಾಸಕ ಮಹೇಶ ಕುಮಠಳ್ಳಿ ಮತ್ತು ಮುಖಂಡ ಕಿರಣ ಜಾಧವ ಅವರು ಮಹಾಲಕ್ಷ್ಮೀ ದೇವಸ್ಥಾನಗಳಿಗೆ ಭೇಟಿ ನೀಡಿ ದೇವಿಯರ ದರ್ಶನ ಪಡೆದರು.
ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರ ಮನೆಗೆ ತೆರಳಿ, ಕೆಲ ಹೊತ್ತು ಮಾತುಕತೆ ನಡೆಸಿದರು. ನಂತರ ಸುದ್ದಿಗಾರರೊಂದಿಗೆ ಮುಖಂಡ ಕುಮಾರ ಬಂಗಾರಪ್ಪ ಮಾತನಾಡಿ, ‘ದೇವರ ದರ್ಶನಕ್ಕೆ ಇಲ್ಲಿಗೆ ಬಂದಿದ್ದೇವೆ ಹೊರತು ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.