ಮೂಡಲಗಿ: ಈಚೆಗೆ ನಡೆದ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಚುನಾವಣೆಯಲ್ಲಿ ಪರಸ್ಪರ ವಿರೋಧಿಗಳಾಗಿದ್ದ ಬಿಡಿಸಿಸಿ ಬ್ಯಾಂಕ್ ನಿರ್ದೇಶಕ ರಮೇಶ ಕತ್ತಿ ಮತ್ತು ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರು ಶನಿವಾರ ಜರುಗಿದ ತಾಲ್ಲೂಕಿನ ಕಲ್ಲೋಳಿಯ ಮಹಾಲಕ್ಷ್ಮೀ ಸೌಹಾರ್ದ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಒಂದೇ ಹೂಮಾಲೆಯನ್ನು ಹಂಚಿಕೊಳ್ಳುವ ಮೂಲಕ ಜನರಲ್ಲಿ ಆಶ್ಚರ್ಯ ಮೂಡಿಸಿದರು.
ಸ್ಥಳೀಯ ಬಿಜೆಪಿ ಕಾರ್ಯಕರ್ತರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಅವರೊಂದಿಗೆ ಅವರಿಬ್ಬರನ್ನು ಹೂಮಾಲೆಯಲ್ಲಿ ಒಂದು ಮಾಡುವ ಮೂಲಕ ಗಮನಸೆಳೆದರು.
ಬಿಜೆಪಿ ನಾಯಕರಲ್ಲಿ ಒಡಕು ಮೂಡಿ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಹಾನಿಯಾಗುವುದು. ಮುಂಬರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಜಿಲ್ಲೆಯಲ್ಲಿ ಮುನಿಸಿಕೊಂಡಿರುವ ಬಿಜೆಪಿ ನಾಯಕರನ್ನು ಒಂದುಗೂಡಿಸುವ ತಂತ್ರಗಾರಿಕೆಯನ್ನು ಕಾರ್ಯಕರ್ತರಿಂದ ಹೂಮಾಲೆ ಹಾಕಿಸುವ ಮೂಲಕ ಕಡಾಡಿ ಅವರು ಮಾಡಿದ್ದಾರೆ ಎಂದು ಕೆಲವರು ಮಾತನಾಡಿಕೊಂಡರು.
ರಮೇಶ ಕತ್ತಿ ಮತ್ತು ಅಣ್ಣಾಸಾಹೇಬ ಜೊಲ್ಲೆ ಇಬ್ಬರು ಸಮಾರಂಭದ ವೇದಿಕೆಯಲ್ಲಿ ಅಂತರ ಕಾಯ್ದುಕೊಂಡಿದ್ದರಲ್ಲದೆ ಮಧ್ಯದಲ್ಲಿ ಜೊಲ್ಲೆ ಅವರು ವೇದಿಕೆಯಿಂದ ನಿರ್ಗಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.