ಬೆಳಗಾವಿಯ ಸಿಪಿಇಡಿ ಮೈದಾನದಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನಾ ಸಮಾವೇಶದಲ್ಲಿ ನುಗ್ಗಿದ ಆರು ಬಿಜೆಪಿ ಕಾರ್ಯಕರ್ತೆಯರು, ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಷಣಕ್ಕೆ ಅಡ್ಡಿಪಡಿಸಿದರು. ಕಪ್ಪು ಬಾವುಟ ತೋರಿಸಿ ಘೋಷಣೆ ಮೊಳಗಿಸಿದರು. ಇದರಿಂದ ಕೋಪಗೊಂಡ ಸಿದ್ದರಾಮಯ್ಯ ಧಾರವಾಡ ಎಎಸ್ಪಿ ನಾರಾಯಣ ಭರಮನಿ ಅವರ ಮೇಲೆ ಕೈ ಮಾಡಲು ಮುಂದಾದರು. ಭರಮನಿ ಅವರು ತಕ್ಷಣಕ್ಕೆ ಹಿಂದೆ ಸರಿದರು.‘ಯಾರಯ್ಯ ಬೆಳಗಾವಿ ಎಸ್ಪಿ. ಏನು ನಡೆಯುತ್ತಿದೆ ಇಲ್ಲಿ? ಏನ್ ಮಾಡುತಿದ್ದೀರಿ ನೀವೆಲ್ಲ’ ಎಂದೂ ರೇಗಿದರು. ಕಾಂಗ್ರೆಸ್ ಪ್ರತಿಭಟನಾ ಸಮಾವೇಶಕ್ಕೆ ನುಗ್ಗಿ ಗಲಾಟೆ ಮಾಡಿದ ಬಿಜೆಪಿಯ ಆರು ಕಾರ್ಯಕರ್ತೆಯರನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಶಿಲ್ಪಾ ಎನ್ನುವವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.