ADVERTISEMENT

ಕರಾಳ ದಿನಾಚರಣೆಗೆ ಸಿದ್ಧತೆ: ಮಹಾರಾಷ್ಟ್ರ ಸಂಸದ, ಸಚಿವರಿಗೆ ಪ್ರವೇಶ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2023, 17:26 IST
Last Updated 30 ಅಕ್ಟೋಬರ್ 2023, 17:26 IST
<div class="paragraphs"><p>ರಾಜ್ಯೋತ್ಸವ</p></div>

ರಾಜ್ಯೋತ್ಸವ

   

ಬೆಳಗಾವಿ: ಮಹಾರಾಷ್ಟ್ರದ ಮೂವರು ಸಚಿವರು ಹಾಗೂ ಒಬ್ಬ ಸಂಸದ ಬೆಳಗಾವಿ ನಗರ ಅಥವಾ ಜಿಲ್ಲೆಯ ಗಡಿ ಪ್ರವೇಶಿಸದಂತೆ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ನವೆಂಬರ್‌ 1ರಂದು ಕರ್ನಾಟಕ ರಾಜ್ಯೋತ್ಸವಕ್ಕೆ ವಿರುದ್ಧವಾಗಿ ಎಂಇಎಸ್‌ ಕರಾಳ ದಿನಾಚರಣೆಗೆ ಸಿದ್ಧತೆ ನಡೆಸಿದೆ. ಇದರಲ್ಲಿ ಪಾಲ್ಗೊಳ್ಳಲು ಮಹಾರಾಷ್ಟ್ರ ಗಡಿ ಉಸ್ತುವಾರಿ ಸಚಿವರಾದ ಶಂಭುರಾಜೆ ದೇಸಾಯಿ, ಚಂದ್ರಕಾಂತ ಪಾಟೀಲ, ಸಚಿವ ದೀಪಕ ಕೇಸರಕರ ಹಾಗೂ ಸಂಸದ ಧೈರ್ಯಶೀಲ ಮಾನೆ ಅವರಿಗೆ ಆಹ್ವಾನ ನೀಡಲಾಗಿದೆ.

ADVERTISEMENT

ಈ ನಾಯಕರು ಬೆಳಗಾವಿಗೆ ಬಂದರೆ ಪ್ರಚೋದನಕಾರಿ ಭಾಷಣ ಮಾಡುವ ಸಾಧ್ಯತೆ ಇದೆ. ಅಲ್ಲದೇ, ಕನ್ನಡ ಸಂಘಟನೆಗಳು ಮುತ್ತಿಗೆ ಹಾಕುವ ಎಚ್ಚರಿಕೆ ನೀಡಿವೆ. ರಾಜ್ಯೋತ್ಸವ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಹಿನ್ನೆಲೆಯಲ್ಲಿ ಈ ನಾಲ್ವರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಅ.31ರ ಬೆಳಿಗ್ಗೆ 6ರಿಂದ ನವೆಂಬರ್‌ 2ರ ಸಂಜೆಯವರೆಗೂ ಈ ನಾಯಕರು ಜಿಲ್ಲೆಯ ಗಡಿ ಪ್ರವೇಶಿಸಬಾರದು ಎಂದು ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.