ADVERTISEMENT

ಸ್ವಯಂ ಪ್ರೇರಿತ ರಕ್ತದಾನ ಶಿಬಿರ

​ಪ್ರಜಾವಾಣಿ ವಾರ್ತೆ
Published 10 ಜೂನ್ 2025, 13:58 IST
Last Updated 10 ಜೂನ್ 2025, 13:58 IST
ಸ್ವಯಂ ಪ್ರೇರಿತ ರಕ್ತದಾನ ಶಿಬಿರ
ಸ್ವಯಂ ಪ್ರೇರಿತ ರಕ್ತದಾನ ಶಿಬಿರ   

ಮುನವಳ್ಳಿ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸೋಮಶೇಖರ ಮಠದ ಮುರುಘೇಂಧ್ರ ಶ್ರೀಗಳ 51ನೇ ಜನ್ಮದಿನದ ಅಂಗವಾಗಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಬೆಳಗಾವಿ ತಾಲೂಕು ಪಂಚಾಯಿತಿ ಸವದತ್ತಿ, ತಾಲ್ಲೂಕು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸವದತ್ತಿ ಪುರಸಭೆ ಕಾರ್ಯಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಇವರ ಸಂಯುಕ್ತಾಶ್ರಯದಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ದಿ.13 ರಂದು ಬೆಳಗ್ಗೆ 9 ರಿಂದ ಮದ್ಯಾಹ್ನ 2 ಗಂಟೆ ವರೆಗೆ ನಡೆಯಲಿದೆ.

ಮುರುಘೇಂದ್ರ ಶ್ರೀಸಾನ್ನಿಧ್ಯವಹಿಸಲಿದ್ದು, ಶಾಸಕ ವಿಶ್ವಾಸ ವೈದ್ಯ, ಮುಖ್ಯ ಅತಿಥಿಗಳಾಗಿ ಪುರಸಭೆ ಅಧ್ಯಕ್ಷ ಸಿ.ಬಿ.ಬಾಳಿ, ಉಪಾಧ್ಯಕ್ಷೆ ಕಾಶವ್ವ ಹಿರೇಮೇತ್ರಿ, ಪುರಸಭೆ ಮುಖ್ಯಾಧಿಕಾರಿ ಎಮ್.ಎಮ್.ತಿಮ್ಮಾಣಿ, ಡಾ. ಆಯ್.ಪಿ.ಗಡಾದ, ಡಾ. ಶ್ರೀಪಾದ ಸಬನಿಸ್, ಡಾ.ನವೀನ ನಿಜಗುಲಿ, ಡಾ. ಎಸ್.ಎಲ್.ದಂಡಗಿ, ಐ.ಆರ್.ಗಂಜಿ, ಸುಭಾಸ ಹುಜರತ್ತಿ, ವಿಶ್ವೇಶ್ವರಯ್ಯ ಹಿರೇಮಠ, ಅಡಿವೆಪ್ಪ ಬೀರಸಿದ್ದಿ, ಶ್ರೀಮತಿ ಜಿ.ಎಲ್.ಭಂಡಾರಿ ಹಾಗೂ ಪುರಸಭೆ ಸರ್ವ ಸದಸ್ಯರು, ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆಯಲ್ಲಿ ತಿಳಿಸಿರುವರು. ಹೆಚ್ಚಿನ ಮಾಹಿತಿಗಾಗಿ  9880138955 ಸಂಪರ್ಕಿಸಿ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT