ADVERTISEMENT

ಬೆಳಗಾವಿ ಗಡಿ ವಿವಾದ: ಸರ್ವಪಕ್ಷಗಳ ಸಭೆಗೆ ಸಿದ್ದರಾಮಯ್ಯ ಆಗ್ರಹ

​ಪ್ರಜಾವಾಣಿ ವಾರ್ತೆ
Published 22 ನವೆಂಬರ್ 2022, 5:48 IST
Last Updated 22 ನವೆಂಬರ್ 2022, 5:48 IST
ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ
ಸಿದ್ದರಾಮಯ್ಯ, ಸಿಎಂ ಬೊಮ್ಮಾಯಿ   

ಬೆಂಗಳೂರು: ‘ಬೆಳಗಾವಿ ಗಡಿ ವಿವಾದದ ಕುರಿತು ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವುದರಿಂದ ರಾಜ್ಯ ಸರ್ಕಾರ ತಕ್ಷಣ ಸರ್ವಪಕ್ಷಗಳ ಸಭೆ ಕರೆದು, ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಟ್ವೀಟ್‌ ಮಾಡಿರುವ ಅವರು, ‘ಬೆಳಗಾವಿ ಗಡಿ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್‌ ಇದೇ 23ರಂದು ವಿಚಾರಣೆ ನಡೆಸಲಿದೆ. ಅದನ್ನು ಎದುರಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಶಿಂದೆಭರದ ಸಿದ್ಧತೆ ನಡೆಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ತಮ್ಮ ರಾಜ್ಯ ಮಂಡಿಸ
ಬೇಕಾದ ವಾದದ ಬಗ್ಗೆ ಸಮಾಲೋಚನೆ ನಡೆಸಲು ವಿರೋಧ ಪಕ್ಷಗಳ ಸದಸ್ಯರನ್ನು ಒಳಗೊಂಡ ಸಮಿತಿಯನ್ನು ಆ ರಾಜ್ಯ ರಚಿಸಿದೆ. ಆ ರಾಜ್ಯ ಗಡಿವಿವಾದವನ್ನು ಎಷ್ಟೊಂದು ಗಂಭೀರವಾಗಿ ಸ್ವೀಕರಿಸಿದೆ ಎನ್ನುವುದಕ್ಕೆ ಇದು ಸಾಕ್ಷಿ’ ಎಂದಿದ್ದಾರೆ.

‘ನೆಲ-ಜಲ-ಭಾಷೆಯ ವಿಚಾರದಲ್ಲಿ ರಾಜ್ಯದ ಹಿತಾಸಕ್ತಿಗೆ ಬದ್ಧವಾಗಿ ರಾಜ್ಯ ಬಿಜೆಪಿ ಸರ್ಕಾರ ಕೈಗೊಳ್ಳುವ ಕ್ರಮಗಳನ್ನು ನಮ್ಮ ಪಕ್ಷ ಬೆಂಬಲಿಸಲಿದೆ. ಸಮಯವ್ಯರ್ಥ ಮಾಡದೆ‌ ಮುಖ್ಯಮಂತ್ರಿ ವಿರೋಧಪಕ್ಷಗಳ ಸಭೆ ಕರೆಯಬೇಕು’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.